ವಿಧಾನಸಭೆ ಚುನಾವಣೆ: ವೈಟ್ ಟಾಪಿಂಗ್ ಕಾಮಗಾರಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು, ಏಪ್ರಿಲ್ 16: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗಬಾರದೆಂದು ಕಾರಣಕ್ಕೆ ನಗರದಲ್ಲಿ ನಡೆಯುತ್ತಿದ್ದ ವೈಟ್ ಟಾಪಿಂಗ್ ಕಾಮಗಾರಿಯನ್ನು ಬಹುತೇಕ ಕಡೆ ಸ್ಥಗಿತಗೊಳಿಸಲಾಗಿದೆ.

ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳುತ್ತಿದ್ದಾರೆ. ಹೊರ ವರ್ತುಲ ರಸ್ತೆಯ ಕೆಲವೆಡೆ ಹೊರತುಪಡಿಸಿ, ಮೈಸೂರು ರಸ್ತೆ, ವೆಸ್ಟ್ ಆಫ್ ಕಾರ್ಡ್ ರೋಡ್ ಸೇರಿದಂತೆ ನಗರದ ಒಳಭಾಗದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಬಹುತೇಕ ಸ್ಥಗಿತಗೊಂಡಿದೆ.

ಕಡಿಮೆ ನಿರ್ವಹಣಾ ವೆಚ್ಚ ಹಾಗೂ ದೀರ್ಘ ಬಾಳಿಕೆಯ ಕಾರಣದಿಂದ ನಗರದ ಆಯ್ದ ಮುಖ್ಯರಸ್ತೆಗಳನ್ನು ನಗರೋತ್ಥಾನ ಯೋಜನೆಯಡಿ 93.47 ಕಿ.ಮೀ ಉದ್ದ 29 ರಸ್ತೆಗಳು ಹಾಗೂ 6 ಜಂಕ್ಷನ್ ಗಳಲ್ಲಿ ವೈಟ್ ಟಾಪಿಂಗ್ ಮಾಡುವ ಕಾಮಗಾರಿಗೆ 2017ರ ಅಕ್ಟೋಬರ್ ನಲ್ಲಿ ಚಾಲನೆ ದೊರೆತಿತ್ತು.

Election fever: White topping work hampers

ಪರ್ಯಾಯ ಮಾರ್ಗ ಕಲ್ಪಿಸದೆ ಹಲವೆಡೆ ಕಾಮಗಾರಿ ಕೈಗೊಂಡಿದ್ದರಿಂದ ವಾಹನ ದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈವರೆಗೆ 15 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಚುನಾವಣೆ ಹಿನ್ನೆಲೆಯಲ್ಲಿ ರಸ್ತೆಯ ಒಂದು ಬದಿ ಕಾಮಗಾರಿ ಪೂರ್ಣಗೊಂಡಿದ್ದರೂ ಮತ್ತೊಂದು ಕಡೆ ಕಾಮಗಾರಿ ಅರ್ಧದಲ್ಲೇ ನಿಂತಿದ್ದು ಸಂಚಾರ ದಟ್ಟಣೆ ಎದುರಿಸುವಂತಾಗುತ್ತದೆ ಎಂದು ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಪಾಲಿಕೆ ಅಧಿಕಾರಿಗಳಿಗೂ ಸೂಚನೆ ನೀಡಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಕಾಮಗಾರಿಗಳ ಬಗ್ಗೆ ಹೆಚ್ಚು ಗಮನ ಹರಿಸಲಾಗಿಲ್ಲ ಎಂದು ಚುನಾವಣಾ ಅಧಿಕಾರಿಯೂ ಆದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾಸ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+