ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿ ಪರಿಷ್ಕರಣೆ: ನಿಗದಿತ ಅವಧಿಗೆ ಮನೆ ಮನೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 01: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2023ರ ಕಾರ್ಯ ಚಟುವಟಿಕೆಗಳ ಭಾಗವಾಗಿರುವ ಮನೆ ಮನೆ ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ- 2023ರ ಕಾರ್ಯ ಚಟುವಟಿಕೆಗಳ ನಡೆಯುತ್ತಿವೆ. ಅದರಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯವು ನವೆಂಬ್ 9ರಿಂದಲೇ ಆರಂಭವಾಗಿದ್ದು, ಇದೇ ಡಿಸೆಂಬರ್ 8ಕ್ಕೆ ಪೂರ್ಣಗೊಳ್ಳಬೇಕಿದೆ. ಈ ಕಾರ್ಯದ ಜವಾಬ್ದಾರಿಯನ್ನು ಬೂತ್ ಮಟ್ಟದ ಅಧಿಕಾರಿ (ಬಿಎಲ್ಓ) ಗಳಿಗೆ ವಹಿಸಲಾಗಿದೆ.

ಪ್ರಸಕ್ತ ವರ್ಷ ಗೋಧಿ ಬಿತ್ತನೆಯಲ್ಲಿ ಶೇ. 11ರಷ್ಟು ಪ್ರಗತಿ ಕಂಡ ಭಾರತಪ್ರಸಕ್ತ ವರ್ಷ ಗೋಧಿ ಬಿತ್ತನೆಯಲ್ಲಿ ಶೇ. 11ರಷ್ಟು ಪ್ರಗತಿ ಕಂಡ ಭಾರತ

ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಈ ವರೆಗೆ ಬೆಂಗಳೂರಿನಲ್ಲಿ ಶೇ. 23 ರಷ್ಟು ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Election officer Direction for completion of house to house survey of voters

ಚುನಾವಣೆ ಆಯೋಗದ ವಿಶೇಷ ಆಯುಕ್ತರು (ಚುನಾವಣೆ) ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮನೆ ಮನೆ ಸಮೀಕ್ಷೆ ಇನ್ನಷ್ಟು ಪರಿಣಾಮಕಾರಿಯಾಗಿ ಸೂಕ್ತವಾಗಿ ನಡೆಯಬೇಕು. ನಿಗದಿತ ಅವಧಿಯೊಳಗೆ ಮನೆ ಮನೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲಾ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳು ನಿರ್ದೇಶಿಸಿದ್ದಾರೆ.

Election officer Direction for completion of house to house survey of voters

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಚಟುವಟಿಕೆಗೆ ಅನುಮತಿ ನೀಡಿದ್ದ ಚಿಲುಮೆ ಸಂಸ್ಥೆಯ ನಿಯಮ ಉಲ್ಲಂಘಿಸಿತ್ತು. ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿದ್ದ ಎರಡು ಪ್ರತ್ಯೇಕ ಪೊಲೀಸ್ ಠಾಣೆ ದೂರು ದಾಖಲಾಗಿತ್ತು. ಇದರಿಂದಾಗಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಚುನಾವಣೆ ಕಾರ್ಯ ಚಟುವಟಿಕೆಗಳಲ್ಲಿ ವಿಳಂಬ ಉಂಟಾಗಿತ್ತು. ಸದ್ಯ ಚುನಾವಣೆ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಮೀಕ್ಷೆ, ಮತದಾರರ ಪಟ್ಟಿ ಪರಿಷ್ಕರಣೆಗೆ ವೇಗ ಪಡೆದುಕೊಳ್ಳುತ್ತಿವೆ.

English summary
Bengaluru urban Election officer Direction for completion of house to house survey of voters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X