ನಟ ಜಗ್ಗೇಶ್ ಕಣಕ್ಕೆ ಎಂಟ್ರಿ, ಯಶವಂತಪುರದಿಂದ ಸ್ಪರ್ಧೆ

ಬೆಂಗಳೂರು, ಏಪ್ರಿಲ್ 23: ಜನಪ್ರಿಯ ನಟ, ನವರಸ ನಾಯಕ ಜಗ್ಗೇಶ್ ಅವರು ಮತ್ತೊಮ್ಮೆ ಸಕ್ರಿಯ ರಾಜಕಾರಣಿಯಾಗಲು ಮುಂದಾಗಿದ್ದಾರೆ. ಜಗ್ಗೇಶ್ ಅವರ ಜನಪ್ರಿಯತೆ ಬೆಲೆಕೊಟ್ಟಿರುವ ಬಿಜೆಪಿ ಹೈಕಮಾಂಡ್, ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸೂಚಿಸಿದೆ. ಸೋಮವಾರದಂದು ಬಿಜೆಪಿ ಪ್ರಕಟಿಸಿದ 4ನೇ ಪಟ್ಟಿಯಲ್ಲಿ ಜಗ್ಗೇಶ್ ಹೆಸರು ಕಾಣಿಸಿಕೊಂಡಿದೆ.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಜಗ್ಗೇಶ್ ಸ್ಪರ್ಧಿಸುವುದು ಖಚಿತವಾಗಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಜವರೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಎಸ್. ಟಿ ಸೋಮಶೇಖರ್ ಅವರು ಕಣದಲ್ಲಿದ್ದಾರೆ.

Elections 2018 : Actor Jaggesh to contest from Yeshwanthpur BJP ticket

ಬಿಜೆಪಿ ನಾಲ್ಕನೇ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಇನ್ನೂ ನಾಲ್ಕು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ.

ಯಶವಂತಪುರದಿಂದ ಮತ್ತೊಮ್ಮೆ ಶೋಭಾ ಕರಂದ್ಲಾಜೆ ಅವರು ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಶೋಭಾ ಅವರು ಸ್ಪರ್ಧಿಸಲು ಹಿಂದೇಟು ಹಾಕಿದ ಕಾರಣ, ಜನಪ್ರಿಯತೆ ಆಧಾರದ ಮೇಲೆ ಜಗ್ಗೇಶ್ ಅವರಿಗೆ ಟಿಕೆಟ್ ಸಿಕ್ಕಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಜಗ್ಗೇಶ್ ಅವರು ತುರುವೇಕೆರೆ ಕ್ಷೇತ್ರದಲ್ಲಿ ಸೋಲು ಕಂಡು, ನಂತರ ಎಂಎಲ್ಸಿಯಾಗಿ, ಕೆಎಸ್ಸಾರ್ಟಿಸಿ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+