• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಕೆ ಹರಿ ಪ್ರಸಾದ್ ರೋಡ್ ಶೋ

|

ಬೆಂಗಳೂರು, ಏಪ್ರಿಲ್ 12 : ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರು ಇಂದು ವಿಜಯನಗರ, ಜಯನಗರ ಹಾಗೂ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಾದ ವಿಜಯನಗರ, ಗೋವಿಂದರಾಜ ನಗರ ಹಾಗೂ ಜಯನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಗಂಗೋಂಡನಹಳ್ಳಿಯ ಮಕ್ಕಾ ಮಸೀದಿಗೆ ಸೇರಿದಂತೆ ಮೂರು ಮಸೀದಿಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮಹಾನ್ ಸುಳ್ಳುಗಾರ ಮೋದಿ, ಸುಳ್ಳು ಹೇಳುವುದೇ ಸಾಧನೆ : ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಗೋವಿಂದರಾಜ ನಗರದ ಮಾಜಿ ಶಾಸಕರಾದ ಪ್ರಿಯಾಕೃಷ್ಣ ಅವರು ಸಾಥ್ ನೀಡಿದರು. ಸಂಜೆ ಜಯನಗರದ ಭೈರಸಂದ್ರವಾರ್ಡ್ ಹಾಗೂ ಇನ್ನಿತರ ಪ್ರದೇಶಗಳಲ್ಲಿ ನಡೆಸಿದ ರೋಡ್ ಶೋ ನಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಗೃಹಮಂತ್ರಿ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ಬಿಬಿಎಂಪಿ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ್ ಜೊತೆಯಾದರು.

'ಬಿಜೆಪಿ ಧರ್ಮ ಮತ್ತು ಜಾತಿ ಆಧಾರದ ಮೇಲೆ ದೇಶವನ್ನು ಒಡೆಯುತ್ತಿದೆ'

ಇದಕ್ಕೂ ಮುನ್ನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ನಡೆದ ಚುನಾವಣಾ ಪ್ರಚಾರದಲ್ಲಿ ರಾಮಲಿಂಗಾರೆಡ್ಡಿ ಅವರು ಸಾಥ್ ನೀಡಿದರೆ, ಪದ್ಮನಾಭ ನಗರ ಕ್ಷೇತ್ರದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಶಾಸಕ ಎಂ ಶ್ರೀನಿವಾಸ್ ಜೊತೆಯಾಗಿದ್ದರು.

ಚೌಕಿದಾರನಿಗೆ ಸರಿಯಾದ ಪಾಠ ಕಲಿಸಿ

ಚೌಕಿದಾರನಿಗೆ ಸರಿಯಾದ ಪಾಠ ಕಲಿಸಿ

ನಂತರ ಮಾತನಾಡಿದ ಅವರು ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರಕಾರದ ಚುಕ್ಕಾಣೀ ಹಿಡಿದಿರುವ ಪ್ರಧಾನಿ ಮೋದಿ ದೇಶದ ಚೌಕಿದಾರ ಎನ್ನುವು ಬಿರುದನ್ನು ಸ್ವತಃ ಕೊಟ್ಟುಕೊಂಡಿದ್ದಾರೆ. ಐಟಿ ಹಾಗೂ ಇಡಿ ಅಧಿಕಾರಿಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸುತ್ತಿರುವ ಈ ಚೌಕಿದಾರರಿಗೆ ಸರಿಯಾದ ಪಾಠ ಕಲಿಸುವುದಕ್ಕೆ ಉತ್ತಮ ಅವಕಾಶ ಬಂದೊದಗಿದೆ. ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವುದೇ ಮಾತುಗಳನ್ನು ಆಡದೇ ಇರುವ ಪ್ರಧಾನಿ ಕೇವಲ ಸೈನಿಕರು ಹಾಗೂ ರೈತರ ಮೇಲೆ ಮತ ಯಾಚಿಸುತ್ತಿದ್ದಾರೆ.

ಪ್ರಧಾನಿ ಮೋದಿ ಶೂನ್ಯ ಸಾಧನೆ

ಪ್ರಧಾನಿ ಮೋದಿ ಶೂನ್ಯ ಸಾಧನೆ

ಕಳೆದ 5 ವರ್ಷಗಳಲ್ಲಿ ಶೂನ್ಯ ಸಾಧನೆ ನೀಡಿರುವ ಪ್ರಧಾನಿ ಮೋದಿ ನಮ್ಮ ಸಂವಿಧಾನವನ್ನು ಬದಲಿಸುವ ಮಾತನ್ನು ಆಡಿದ್ದಾರೆ. ದೇಶಪ್ರೇಮದ ಬಗ್ಗೆ ದೊಡ್ಡ ದೊಡ್ಡ ಹೇಳಿಕೆಯನ್ನು ನೀಡುತ್ತಿರುವ ಪ್ರಧಾನಿ ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದರೆ ಎಂದು ಪ್ರಶ್ನಿಸಿದರು. ಇಂತಹ ಕೋಮುವಾದಿ ಪಕ್ಷಕ್ಕೆ ಸರಿಯಾದ ಪಾಠವನ್ನು ಕಲಿಸುವ ಅವಕಾಶ ಬಂದಿದೆ ಎಂದರು.

ಮಾಜಿ ಶಾಸಕ ಪ್ರಿಯಾಕೃಷ್ಣ ಮಾತನಾಡಿ

ಮಾಜಿ ಶಾಸಕ ಪ್ರಿಯಾಕೃಷ್ಣ ಮಾತನಾಡಿ

ಗೊವಿಂದರಾಜನಗರ ಕ್ಷೇತ್ರದ ಮಾಜಿ ಶಾಸಕ ಪ್ರಿಯಾಕೃಷ್ಣ ಮಾತನಾಡಿ, ಜಾತಿ ಧರ್ಮಗಳ ಮಧ್ಯೆ ಸಾಮರಸ್ಯ ಹಾಗೂ ಅವುಗಳ ಅಭಿವೃದ್ದಿಗೆ ಶ್ರಮಿಸುವ ಪಕ್ಷ ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷದ ವತಿಯಿಂದ ಅನುಭವಿ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಬಿ ಕೆ ಹರಿಪ್ರಸಾದ್ ಅವರನ್ನು ಕಣಕ್ಕೆ ಇಳಿಸಲಾಗಿದೆ. ಈ ಬಾರಿ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಬದಲಾಗಿವೆ. ಬದಲಾಗಿರುವ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಒಗ್ಗಟ್ಟಿನಿಂದ ಬಳಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಲೋಕಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ನಾಯಕರೂ ಕೂಡಾ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿತ್ತಿದ್ದು ನಮ್ಮ ಅಭ್ಯರ್ಥಿಯ ಗೆಲವು ನಿಶ್ಚಿತ ಎಂದರು.

ಉತ್ತಮ ಬೆಂಗಳೂರಿಗಾಗಿ ಮತ ನೀಡಿ

ಉತ್ತಮ ಬೆಂಗಳೂರಿಗಾಗಿ ಮತ ನೀಡಿ

ಬೆಂಗಳೂರು ಇಂದು ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಹೊಂದಲು ಕಾರಣ ಕಾಂಗ್ರೆಸ್. ಅಲ್ಲದೆ, ನಿರುದ್ಯೋಗ ನಿವಾರಣೆ, ಬಡತನ ನಿವಾರಣೆ, ರೈತರ ಅಭಿವೃದ್ದಿಗೆ ಸಾಕಷ್ಟು ಯೋಜನೆಗಳನ್ನು ಕಾಂಗ್ರೆಸ್ ಪಕ್ಷ ತಂದಿದೆ. ಆದರೆ ಈ ಯಾವುದೇ ಕೊಡುಗೆಯನ್ನು ನೀಡದ ಮೋದಿ ಕೇವಲ ಧರ್ಮದ ಆಧಾರದ ಮೇಲೆ ಹಾಗೂ ಸೈನಿಕರನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದ್ದಾರೆ.

English summary
Bangalore South Loksabha Constituency Congress Candidate Shri B.K Hariprasad Participated The Road Shows Held In Vijayanagar, Govindaraja Nagar & Jayanagara assembly Constituency today(April 12). Ramalinga Reddy, MLA Sowmya Reddy, BBMP Mayor Gangambika Mallikarjun, Ex MLA Priya Krisha Participated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X