ಬೆಂಗಳೂರು ಮತದಾರ ಪಟ್ಟಿ ಪರಿಷ್ಕರಣೆ: ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ
ಬೆಂಗಳೂರು, ಡಿಸೆಂಬರ್ 21: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಈಗಾಗಲೇ ಕರಡು ಮತದಾರರು ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಮುಂದಿನ ತಿಂಗಳು ಅಂತಿಮ ಪಟ್ಟಿ ಪ್ರಕಟವಾಗಲಿದೆ. ಈ ಮಧ್ಯೆ ಮತದಾರರ ಪಟ್ಟಿಯ ಶುದ್ಧೀಕರಣಕ್ಕಾಗಿ ನಗರ ಜಿಲ್ಲಾ ಚುನಾವಣಾಧಿಕಾರಿಗಳು ಮನೆ ಮನೆ ಭೇಟಿ ಕೊಡುತ್ತಿದ್ದಾರೆ.
ಹೌದು, ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆಯನ್ನು ಮಾಡಲಾಗುತ್ತದೆ. ಈ ಪೈಕಿ ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಈ ಸಂಬಂಧ ಮನೆ ಮನೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಜೊತೆಗೆ ಬಿಬಿಎಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪರಿಶೀಲನೆ ಆರಂಬಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಅವಕಾಶ ನೀಡಲಾಗಿತ್ತು.
ಆಕ್ಷೇಪಣೆ ಸಲ್ಲಿಕೆ ಸಮಯ ಅಂತ್ಯ
ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ದಿನಾಂಕ ಇದೇ ಡಿಸೆಂಬರ್ 09ರವರೆಗೆ ಅವಕಾಶ ನೀಡಿತ್ತು. ಈ ವೇಳೆ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿರುತ್ತಾರೆ.
ಭಾರತ ಚುನಾವಣಾ ಆಯೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡಲಾಗುತ್ತದೆ. ಅದರಂತೆ ಇಂದು ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.
ಅರ್ಜಿದಾರರಿಗೆ ಮಾರ್ಗದರ್ಶನ ನೀಡಿ
ಶಾಂತಿನಗರದ ಹಾಗೂ ಶಿವಾಜಿನಗರರದ ವಿಧಾನಸಭಾ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ಒದಗಿಸಲು ಮುಖ್ಯ ಆಯುಕ್ತರು ಸೂಚಿಸಿದರು.

ಹೆಬ್ಬಾಳ ವಿಧಾನಸಭಾ ಕ್ಷೆತ್ರದ ಸಂಜಯನಗರದ ಅಮರ ಜ್ಯೋತಿ ಲೇಔಟ್ ನಲ್ಲಿ ನಮೂನೆ 06ರ ಮೂಲಕ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ನಾಗಶೆಟ್ಟಿಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮೊದಲ ಮತದಾರ ಮನೆಗೆ ಭೆಟಿ ನೀಡಿ ನಮೂನೆಯನ್ನು ಪರಿಶೀಲಿಸಿದರು.
ಯಲಹಂಕ ವ್ಯಾಪ್ತಿಯಲ್ಲಿ ಸೂಕ್ತ ಪರಿಶೀಲನೆ
ಯಲಹಂಕ ವಿಧಾನ ಸಭಾ ಕ್ಷೇತ್ರದ ಪೂರ್ವಾಂಕರ ಅಪಾರ್ಟ್ಮೆಂಟ್ ನಲ್ಲಿ ನಮೂನೆಯನ್ನು ಪರಿಶೀಲಿಸಿ, ಮತದಾರ ಸ್ಥಳಾಂತರ ಮಾಡಿಕೊಂಡಿರುವುದಾಗಿ ನಮೂನೆ-7ರ ಮೂಲಕ ಅರ್ಜಿ ಸಲ್ಲಿಸಿರುವ ಪ್ರಕಾರ ತಿರಸ್ಕರಿಸಲಾಗಿರುತ್ತದೆ. ಮತ್ತೊಮ್ಮೆ ನಮೂನೆ ಸಲ್ಲಿಸಿದ್ದ ಪರಿಣಾಮ ತಿರಸ್ಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಯಲಹಂಕದ ರೈಲ್ವೆ ವೀಲ್ ಪ್ಯಾಕ್ಟರಿ ಕ್ವಾಟ್ರಸ್ ನಲ್ಲಿ ನಮೂನೆ ಪರಿಶೀಲಿಸಿ ಮತದಾರ ಬೇರೆ ಸ್ಥಳಾಂತರಗೊಂಡಿರುವ ಕಾರಣ ನಮೂನೆಯನ್ನು ತಿರಸ್ಕರಿಸಲಾಗಿದೆ. ಮನೆ-ಮನೆಗೆ ಭೇಟಿ ನೀಡಿ ನಮೂನೆಗಳನ್ನು ಸೂಪರ್ ಚೆಕ್ಕಿಂಗ್ ಮಾಡಿ ಎಲ್ಲವೂ ಸರಿ ಇದೆ. ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆಸಬೇಕೆಂದು ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ನಿರ್ದೇಶಿಸಿದರು.












Click it and Unblock the Notifications