ಬೆಂಗಳೂರು: ನಡುರಸ್ತೆಯಲ್ಲಿ ವಿದ್ಯುತ್ ಕಂಬ ತೆರವು, ನಿವಾಸಿಗಳು ನಿರಾತಂಕ
ಬೆಂಗಳೂರು, ಸೆಪ್ಟಂಬರ್ 29: ಸ್ಥಳೀಯ ನಿವಾಸಿಗಳ ನಿರಂತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಮೂಲಕ ಜನರ ಆತಂಕ ದೂರವಾಗಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ಮಹಾದೇವಪುರ ವ್ಯಾಪ್ತಿಯ ಬಳಗೆರೆ ಮುಖ್ಯ ರಸ್ತೆಯಲ್ಲಿಯೇ ವಿದ್ಯುತ್ ಕಂಬ ಒಂದನ್ನು ಅಳವಡಿಸಲಾಗಿತ್ತು. ನಿತ್ಯ ನೂರಾರು ವಾಹನಗಳು ಓಡಾಡುವ ಜಾಗದಲ್ಲೇ ವಿದ್ಯುತ್ ಕಂಬ ನಿಲ್ಲಿಸಲಾಗಿತ್ತು. ಇದು ರಸ್ತೆ ಅಪಘಾತ ಸೇರಿದಂತೆ ವಿವಿಧ ಗಂಡಾಂತರಗಳಿಗೆ ಆಹ್ವಾನ ನೀಡುವಂತೆ ರಸ್ತೆಯಲ್ಲೇ ಅಳವಡಿಸಲಾಗಿತ್ತು.
ಈ ಸಂಬಂಧ ಬಳಗೆರೆ ಮುಖ್ಯ ರಸ್ತೆಯ ಸ್ಥಳಿಯ ನಿವಾಸಿಗಳು ವಿದ್ಯುತ್ ಪೂರೈಸುವ ಸರ್ವೀಸ್ ಲೈನ್ ಇರುವ ವಿದ್ಯುತ್ ಕಂಬವನ್ನು ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದು, ಕೂಡಲೇ ತೆರವು ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬಗ್ಗೆ ಬೆಸ್ಕಾಂ ನಿರ್ಲಕ್ಷ್ಯ ವಹಿಸಲಾಗಿತ್ತು ಎನ್ನಲಾಗಿದೆ.

ಸಾರ್ವಜನಿಕರ ಮನವಿ ಮೇರೆಗೆ ಮಹದೇವಪುರ ಟಾಸ್ಕ್ ಫೋರ್ಸ್ ಮೊಬಿಲಿಟಿ ತಂಡವು ಕಾರ್ಯಾಚರಣೆ ನಡೆಸಿದೆ. 'ಬಳಗೆರೆ ಮುಖ್ಯ ರಸ್ತೆಯಲ್ಲಿನ ನಿವಾಸಿಗಳ ಬಹುಬೇಡಿಕೆಯಂತೆ ವಿದ್ಯುತ್ ಕಂಬ ತೆರವುಗೊಳಿಸಲಾಗಿದೆ. ಅದಕ್ಕು ಮೊದಲು ಇಲ್ಲಿನ ಭೂ ಮಾಲೀಕರ ಜತೆಗಿನ ವ್ಯಾಜ್ಯ ಸಮಸ್ಯೆ ಇತ್ತು. ಇದೀಗ ಆ ಸಮಸ್ಯೆ ಮುಕ್ತಾಯಗೊಂಡಿದ್ದರಿಂದ ವಿದ್ಯುತ್ ಕಂಬ ಸ್ಥಳಾಂತರ ಸಾಧ್ಯವಾಗಿದೆ ಎಂದು ಟಾಸ್ಕ ಫೋರ್ಸ್ ತಂಡದ ಅಧಿಕಾರಿಗಳು ಟ್ವಿಟ್ಟರ್‌ನಲ್ಲಿ ಬರೆದುಕೊಂಡು ಬಗ್ಗೆ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಟ್ವಿಟ್ಟರ್‌ನಲ್ಲಿ ನಾಗರಿಕರಿಂದ ಮನವಿ
ಬಳಗೆರೆ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ಅಲ್ಲಿನ ನಿವಾಸಿಗಳ ಗುಂಪು ರಸ್ತೆಯ ಮಧ್ಯದ ವಿದ್ಯುತ್ ಕಂಬಗಳ ಚಿತ್ರಗಳನ್ನು ಹಂಚಿಕೊಂಡು ತೆರವಿಗೆ ಮನವಿ ಮಾಡಿದ್ದಾರೆ. ಬಳಗೆರೆ ಮುಖ್ಯರಸ್ತೆಯಲ್ಲಿ ವಿಸ್ತರಣೆ ಕೆಲಸ ಮುಂದುವರಿದಿದ್ದು, ವಿದ್ಯುತ್ ಕಂಬಗಳು ನಡುರಸ್ತೆಯಲ್ಲಿರುವುದರಿಂದ ಅಪಘಾತ ಸಂಭವಿಸಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಸಮಸ್ಯೆಗೆ ಪರಿಹಾರ ಏನು ಎಂದು ನಾಗರಿಕರು ಪ್ರಶ್ನಿಸಿ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಶಾಸಕರು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಟ್ಯಾಗ್ ಮಾಡಿದ್ದಾರೆ.

ಹವಾಮಾನ ಪರಿಸ್ಥಿತಿಗಳನ್ನು ಪರಿಗಣಿಸಿ ಇಲ್ಲಿನ ಮುಖ್ಯರಸ್ತೆಯ ಡಾಂಬರೀಕರಣವನ್ನು ವಿಸ್ತರಿಸುತ್ತಿರುವುದು ಉತ್ತಮ ನಿರ್ಧಾರವಾಗಿದೆ. ಇದು ಸೇರಿದಂತೆ ವಿವಿಧ ಕಾರಣಗಳಿಂದ ವಿದ್ಯುತ್ ಕಂಬ ಸ್ಥಳಾಂತರ ವಿಳಂಬವಾಗಿತ್ತು. ಈಗ ವಿದ್ಯುತ್ ಸರಬರಾಜು ನಿಲ್ಲಿಸಿ ಕಂಬ ತೆರವು ಮಾಡಲಾಗಿದೆ ಎಂದು ಮಹದೇವಪುರ ಟಾಸ್ಕ್ ಫೋರ್ಸ್ ಮೊಬಿಲಿಟಿ ತಂಡವು ತಿಳಿಸಿದೆ.
-
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications