ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಬಂದ್; ಕಾರಣ, ಸಮಯ ತಿಳಿಯಿರಿ

ಬೆಂಗಳೂರು, ಮಾರ್ಚ್‌ 05: ಉದ್ಯಾನ ನಗರಿ ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಆದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ವಾಹನಗಳ ಸಂಚಾರಕ್ಕೆ ಬಂದ್ ಆಗಲಿದೆ. ಈ ಫ್ಲೈ ಓವರ್ ಕಾರಣಕ್ಕೆ ನಗರದಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಈಗ ಪ್ರತಿದಿನ ಮುಂದಿನ ಆದೇಶದ ತನಕ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾರ್ಚ್‌ 5ರ ಬುಧವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತದೆ. ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

Electronic City Flyover Closed From Night 11 PM To 6 Am

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಕಾರಣ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿ ವಾಹನಗಳ ಸಂಚಾರವನ್ನು ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಬಂದ್ ಮಾಡಲಾಗಿದೆ. ಮುಂದಿನ ಆದೇಶದ ತನಕ ಈ ವಾಹನ ಸಂಚಾರ ನಿರ್ಬಂಧ ಆದೇಶ ಜಾರಿಯಲ್ಲಿರುತ್ತದೆ.

ಆದೇಶದ ವಿವರಗಳು: ಎನ್‌ಹೆಚ್‌ಎಐ ಈ ಕುರಿತು ಮಾಹಿತಿ ನೀಡಿದ್ದು, ಬೆಳಗ್ಗೆ 6 ರಿಂದ ರಾತ್ರಿ 11ರ ತನಕ ಮಾತ್ರ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಡೆಸಬಹುದು. ರಾತ್ರಿ 11ರ ಬಳಿಕ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ಸಂಚಾರಿ ಪೊಲೀಸರು ತಮ್ಮ ಪ್ರಕಟಣೆಯಲ್ಲಿ ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್‌ನಲ್ಲಿ ಎನ್‌ಹೆಚ್‌ಎಐ ವತಿಯಿಂದ ಪ್ರಮುಖ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದ್ದು, ಈ ಸಂಬಂಧ ಬುಧವಾರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ & ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಎಲಿವೇಟೆಡ್ ಫ್ಲೈ ಓವರ್‌ನ ಎರಡೂ ಕಡೆಗಳಲ್ಲಿ ರಾತ್ರಿ 11 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಲಾಗುವುದು.

ಹಗಲಿನ ವೇಳೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸಲು ಕೋರಿದೆ ಎಂದು ಹೇಳಿದ್ದಾರೆ.

ಸರಣಿ ಅಪಘಾತ, ಸಂಚಾರ ದಟ್ಟಣೆ, ಬೈಕ್ ವೀಲ್ಹಿಂಗ್ ಹೀಗೆ ವಿವಿಧ ಕಾರಣಕ್ಕೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಸದಾ ಸುದ್ದಿಯಲ್ಲಿರುತ್ತದೆ. ಕೆಲವು ತಿಂಗಳ ಹಿಂದೆ ರಾತ್ರಿ ವೇಳೆ ಸುಮಾರು 2 ತಾಸು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನಗಳು ಸಂಚಾರ ದಟ್ಟಣೆಯಲ್ಲಿ ಸಿಕ್ಕಿ ಬಿದ್ದಿದ್ದವು.

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಬೈಕ್‌ಗಳ ಸಂಚಾರ ರದ್ದುಗೊಳಿಸಬೇಕು ಎಂಬ ಬೇಡಿಕೆಯೂ ಇದೆ. ಆದರೆ ಈ ಕುರಿತು ಇನ್ನೂ ಸಂಚಾರಿ ಪೊಲೀಸರು ತೀರ್ಮಾನವನ್ನು ಕೈಗೊಂಡಿಲ್ಲ. ಈಗ ಎನ್‌ಹೆಚ್‌ಎಐ ವಿವಿಧ ಕಾಮಗಾರಿಗಳ ಕಾರಣಕ್ಕೆ ರಾತ್ರಿ ವೇಳೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಿದೆ.

2019ರಲ್ಲಿಯೂ ನಿರ್ವಹಣೆ ಕಾರಣಕ್ಕೆ ಹಲವು ದಿನಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಬಸ್ ಹಾಗೂ ಬೃಹತ್ ವಾಹನಗಳ ಓಡಾಟ ನಿಷೇಧಿಸಲಾಗಿತ್ತು. ಈಗ ವಿವಿಧ ಕಾಮಗಾರಿಯನ್ನು ಕೈಗೊಳ್ಳಲು ಪುನಃ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+