ಬೆಂಗಳೂರು ಪೊಲೀಸರ ಬಲೆಗೆ ಅಂತಾರಾಜ್ಯ ಡಾಕು ಗ್ಯಾಂಗ್
ಬೆಂಗಳೂರು, ಫೆ. 14: ಕೋಟಿ ಕೋಟಿ ಲೋನ್ ಕೊಡಿಸುವುದಾಗಿ ಉದ್ಯಮಿಗಳನ್ನು ನಂಬಿಸಿ ಮುಂಗಡ ಬಡ್ಡಿ ರೂಪದಲ್ಲಿ ಕೋಟಿ ಕೋಟಿ ಪಡೆದು ವಂಚಿಸುತ್ತಿದ್ದ ಅಂತಾರಾಜ್ಯ ಡಾಕು ಗ್ಯಾಂಗ್ ಅನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.
ಮುಂಬಯಿ ಮೂಲದ ಸಂತೋಷ್, ಸಂದೇಶ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 87 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಮೈಸೂರು ಮೂಲದ ಗಾರ್ಮೆಂಟ್ ಫ್ಯಾಕ್ಟರಿ ಉದ್ಯಮಿ ವಿನ್ಸೆಂಟ್ ಎಂಬುವರು ಬಿಸಿನೆಸ್ ಸಾಲಕ್ಕಾಗಿ ಪರದಾಡುತ್ತಿದ್ದರು. ಈ ವೇಳೆ ಲೋನ್ ಕೊಡಿಸುವುದಾಗಿ ಪರಿಚಯಿಸಿಕೊಂಡಿದ್ದ ಸಂತೋಷ್ ಶುಕ್ಲಾ ಮತ್ತು ಸಂದೇಶ್ ತಿವಾರಿ, ಬ್ಯುಜಿನೆಸ್ ಲೋನ್ ಕಡಿಮೆ ಬಡ್ಡಿಗೆ ಕೊಡಿಸುವುದಾಗಿ ನಂಬಿಸಿದ್ದರು. ಐಷಾರಾಮಿ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ ಸೂಟ್ ಕೇಸ್‌ನಲ್ಲಿ ಹಣ ತೋರಿಸುತ್ತಿದ್ದರು. ಇದನ್ನು ನಂಬಿದ್ದ ವಿನ್ಸೆಂಟ್ ತನಗೆ ನೂರು ಕೋಟಿ ಲೋನ್ ಕೊಡಿಸಿ ಎಂದು ಕೇಳಿದ್ದರು.

ಲೋನ್ ಕೊಡಿಸಲು ಮುಂಗಡವಾಗಿ ಒಂದು ಕೋಟಿ ರೂ. ಹಣ ಕೊಡುವಂತೆ ಹೇಳಿದ್ದಾರೆ. ಇವರ ಮಾತು ನಂಬಿ ವಿನ್ಸೆಂಟ್ 23 ಲಕ್ಷ ರೂ. ನಗದು ಹಣ ನೀಡಿದ್ದರು. ಆ ಬಳಿಕ ಬ್ಯಾಂಕ್ ಮೂಲಕ 64 ಲಕ್ಷ ರೂ. ಸೇರಿದಂತೆ ಒಟ್ಟು ಒಂದು ಕೋಟಿ ರೂ. ನೀಡಿದ್ದರು. ಹಣ ಪಡೆದಿದ್ದ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.
ಮೋಸ ಹೋಗಿರುವ ಸಂಗತಿ ತಿಳಿದ ವಿನ್ಸೆಂಟ್ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಐವರು ಅಂತಾರಾಜ್ಯ ಡಾಕು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರು ಅನೇಕ ಉದ್ಯಮಿಗಳಿಗೆ ಲಂಚ ಕೊಡಿಸುವುದಾಗಿ ನಂಬಿಸಿ ಮುಂಗಡ ಹಣ ಪಡೆದು ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳು, ಆಂಧ್ರ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಸಣ್ಣ ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಹಣ ಪಡೆದು ನಾಮ ಹಾಕುತ್ತಿದ್ದರು. ಇವರ ಬ್ಯಾಂಕ್ ಖಾತೆಗಳಲ್ಲಿ ಕೋಟ್ಯಂತರ ರೂ. ವಹಿವಾಟು ನಡೆದಿದ್ದು, ಸದ್ಯ 84 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳು ವಂಚನೆ ಮಾಡಿರುವ ಸಂಬಂಧ ಇತರರು ದೂರು ನೀಡುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications