• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮತ್ತೆ ಎಲಿವೇಟೆಡ್ ಕಾರಿಡಾರ್ ಚರ್ಚೆ: ಅನುಷ್ಠಾನಕ್ಕಿರುವ ತೊಡಕುಗಳು

|

ಬೆಂಗಳೂರು, ಫೆಬ್ರವರಿ 20: ಮತ್ತೆ ಎಲಿವೇಟೆಡ್ ಕಾರಿಡಾರ್ ಕುರಿತು ಚರ್ಚೆ ಆರಂಭವಾಗಿದೆ. ಸಂಚಾರ ದಟ್ಟಣೆ ಕಡಿಮೆ ಮಾಡುವ ಮತ್ತು ಸುಲಭ ಸಂಪರ್ಕಕ್ಕೆ ಅಗತ್ಯವಿರುವ 87 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಲು ಬಿಜೆಪಿ ಶಾಸಕರು

ತೀರ್ಮಾನಿಸಿದ್ದಾರೆ.ಯೋಜನೆಯ ನೀಲಿನಕ್ಷೆ ಸಿದ್ಧಪಡಿಸಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಯೋಜನೆ ಕುರಿತು ಮಾಹಿತಿ ನೀಡಿದ್ದಾರೆ. ಎಲಿವೇಟೆಡ್ ಕಾರಿಡಾರ್ ಯೋಜನೆ ನಗರದ ವಾಹನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದಿಲ್ಲ, ಅದರ ಬದಲು ಸಮಸ್ಯೆ ಮತ್ತಷ್ಟು ಹೆಚ್ಚುವುದಕ್ಕೆ ಕಾರಣವಾಗಲಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಆಶಿಶ್ ವರ್ಮಾ ಹೇಳಿದ್ದಾರೆ.

ನಮ್ಮ ಮೆಟ್ರೋ ಮಾದರಿಯಲ್ಲಿ ಎಲಿವೇಟೆಡ್ ಕಾರಿಡಾರ್

ನಮ್ಮ ಮೆಟ್ರೋ ಮಾದರಿಯಲ್ಲಿ ಎಲಿವೇಟೆಡ್ ಕಾರಿಡಾರ್

ನಮ್ಮ ಮೆಟ್ರೋ ಮಾದರಿಯಲ್ಲೇ ಎಲಿವೇಟೆಡ್ ಕಾರಿಡಾರ್‌ನ್ನು ವಿವಿಧ ಹಂತಗಳಲ್ಲಿ ನಿರ್ಮಾಣ ಮಾಡಬೇಕಿದೆ. ಹೀಗಾಗಿ ಕನಿಷ್ಠ ಮೊದಲ ಹಂತದ ಕಾಮಗಾರಿಗಳಿಗೆ ಬಜೆಟ್‌ನಲ್ಲಿ ಆದ್ಯತೆ ಕೊಡಬೇಕು ಎನ್ನುವುದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡುವುದಕ್ಕೂ ಸಭೆಯಲ್ಲಿ ತೀರ್ಮಾನಿಸಲಾಯಿತು.

ಎಲಿವೇಟೆಡ್ ಕಾರಿಡಾರ್ ಯೋಜನೆಯಿಂದ 1,100 ಆಸ್ತಿಗಳಿಗೆ ಹಾನಿ

ಯೋಜನೆಗೆ ಸುಮಾರು 26 ಸಾವಿರ ಕೋಟಿ ವೆಚ್ಚ

ಯೋಜನೆಗೆ ಸುಮಾರು 26 ಸಾವಿರ ಕೋಟಿ ವೆಚ್ಚ

ಯೋಜನೆಗೆ ಅಂದಾಜು 26 ಸಾವಿರ ಕೋಟಿ ರೂ. ಬೇಕಾಗುತ್ತದೆ. ಇಷ್ಟು ಹಣ ಹೊಂದಿಸುವುದು ಕಷ್ಟವಾಗುತ್ತದೆ. ಹೀಗಾಗಿ ಮೊದಲ ಹಂತದಲ್ಲಿ ಕನಿಷ್ಠ ಪೂರ್ವ ಪಶ್ಚಿಮ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳಬೇಕಿದ್ದು, ಬಜೆಟ್ ನಲ್ಲಿ ಅನುದಾನ ಒದಗಿಸುವುದಕ್ಕೆ ಮನವಿ ಮಾಡಲು ಶಾಸಕರು ಮುಂದಾಗಿದ್ದಾರೆ.

 120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿ

120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿ

ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹೊರವಲಯದ 120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 1400 ಕೋಟಿ ರೂ. ಬೇಕಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ಹಣ ಪಡೆಯುವ ಸಂಬಂಧ ಚರ್ಚಿಸಲಾಯಿತು. ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಭೇಟಿ ಮಾಡಿ ಚರ್ಚಿಸುವುದಕ್ಕೂ ನಿರ್ಧಾರ ಕೈಗೊಳ್ಳಲಾಯಿತು.

ಭೂಸ್ವಾಧೀನಕ್ಕೆ 10 ಸಾವಿರ ಕೋಟಿ ರೂ

ಭೂಸ್ವಾಧೀನಕ್ಕೆ 10 ಸಾವಿರ ಕೋಟಿ ರೂ

ಮೊದಲ ಹಂತದ 9,300 ಕೋಟಿ ರೂ. ಅಂದಾಜಿನ ಯೋಜನೆ ಕೆಆರ್ ಪುರದಿಂದ ಹಲಸೂರು, ಕಂಟೋನ್ಮೆಂಟ್ , ಮೇಖ್ರಿ ಸರ್ಕಲ್ ಮೂಲಕ ಯಶವಂತಪುರಕ್ಕೆ ಸಂಪರ್ಕ ಕಲ್ಪಿಸಿದೆ. 29 ಕಿ.ಮೀ ಉದ್ದದ ಈ ಮಾರ್ಗವು ಆರು ಪಥದಲ್ಲಿ ಇರುತ್ತದೆ ಎಂದು ಅಶ್ವತ್ಥನಾರಾಯಣ ಸಭೆಯ ಗಮನಕ್ಕೆ ತಂದರು. ಮೂರು ಹಂತಗಳಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಿದ್ದು, 10 ವರ್ಷ ಕಾಮಗಾರಿ ನಡೆಯಲಿದೆ.

English summary
City MLAs from the BJP met Deputy Chief Minister C.N. Ashwath Narayan on implementing the controversial elevated corridor project that had been opposed by several BJP leaders when it was mooted by the previous Congress-JDS government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X