ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲಿವೇಟೆಡ್ ಕಾರಿಡಾರ್‌ ಯೋಜನೆಗೆ ನೀಡಿದ್ದ ಮಧ್ಯಂತರ ತಡೆ ವಿಸ್ತರಣೆ

|
Google Oneindia Kannada News

ಬೆಂಗಳೂರು, ಜೂನ್ 4: ಎಲಿವೇಟೆಡ್ ಕಾರಿಡಾರ್‌ ಯೋಜನೆಗೆ ನೀಡಿದ್ದ ಮಧ್ಯಂತರ ತಡೆಯನ್ನು ಹೈಕೋರ್ಟ್ ಇನ್ನು ಎರಡು ವಾರ ವಿಸ್ತರಿಸಿದೆ.

ನಮ್ಮ ಬೆಂಗಳೂರು ಫೌಂಡೇಶನ್ ಮತ್ತು ಸಿಟಿಜನ್ ಆಕ್ಷನ್ ಫೋರಂ ಮತ್ತಿತರೆ ಸಂಸ್ಥೆಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿ ಸಿಜೆ ಎಎಸ್ ಓಕ್ ಮತ್ತು ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರೆಗೆ ಬಂದಿತ್ತು.

ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಹೈಕೋರ್ಟ್ ತಡೆ ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಹೈಕೋರ್ಟ್ ತಡೆ

ಆಗ ಹೆಚ್ಚುವರಿ ಅಡ್ವೊಕೇಟ್ ಜನರಲ್ ದಿನೇಶ್ ರಾವ್ ಅವರು ಸ್ವಲ್ಪ ಸಮಯ ಕೋರಿದ ಹಿನ್ನೆಲೆಯಲ್ಲಿ ಜೂನ್ 17ರವರೆಗೆ ವಿಸ್ತರಣೆ ಮಾಡಿ ವಿಚಾರಣೆ ಮುಂದೂಡಿತು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎಲಿವೇಟೆಡ್ ಕಾರಿಡಾರ್ ಯೋಜನೆ ವಿರುದ್ಧ ಸಾಕಷ್ಟು ಹೋರಾಟಗಳು ನಡೆಯುತ್ತಿವೆ.

Elevated corridor stay extended till June 17

ಶಾಂತಿನಗರದಿಂದ ಬನ್ನೇರುಘಟ್ಟ ಮಾರ್ಗದಲ್ಲಿ ಅಧ್ಯಯನ ತಂಡ ತೆರಳಿತ್ತು. ಈ ಎಲಿವೇಟೆಡ್ ಕಾರಿಡಾರ್ ಯೋಜನೆಯಲ್ಲಿ ಮೊದಲಿಗೆ 12 ಮೀಟರ್ ಅಗಲ ಎಂದು ಹೇಳಲಾಗಿತ್ತು.

ಇದೀಗ 19 ಮೀಟರ್‌ ಅಗಲದ ಕಾರಿಡಾರ್ ನಿರ್ಮಿಸುತ್ತಿರುವ ಕಾರಣ ಬಿಟಿಎಸ್ ಮುಖ್ಯರಸ್ತೆಯಲ್ಲಿ ಸಾಕಷ್ಟು ಆಸ್ತಿಗಳಿಗೆ ಹಾನಿಯಾಗಲಿದೆ ಎನ್ನುವ ದೂರು ಕೂಡ ಕೇಳಿಬಂದಿತ್ತು. ಹೆಬ್ಬಾಳದ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಿಂದ ಮೇಕ್ರಿ ಸರ್ಕಲ್‌ ಮಾರ್ಗವಾಗಿ ಸಿಲ್ಕ್‌ಬೋರ್ಡ್‌ವರೆಗೆ ಎಲಿವೇಟೆಡ್‌ ಕಾರಿಡಾರ್‌ ನಿರ್ಮಿಸಲು ಸರಕಾರ ಟೆಂಡರ್‌ ಕರೆದಿದೆ.

ಯೋಜನೆಗೆ ಕರೆದಿರುವ ಟೆಂಡರ್‌ ಸರಕಾರ ಅಂತಿಮಗೊಳಿಸುವಂತಿಲ್ಲ. ಒಂದು ವೇಳೆ ಅಂತಿಮಗೊಳಿಸಿದರೂ ಮುಂದಿನ ವಿಚಾರಣೆವರೆಗೆ ಯಾವುದೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ಪೀಠ ತಿಳಿಸಿತ್ತು.

English summary
Elevated corridor stay extended till June 17,Karnataka High court extended stay on elevated corridor project in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X