ಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ನಿಧನ
ಬೆಂಗಳೂರು, ಡಿಸೆಂಬರ್ 15: ಖ್ಯಾತ ಏರೋಸ್ಪೇಸ್ ವಿಜ್ಞಾನಿ ಮತ್ತು ಪದ್ಮ ವಿಭೂಷಣ ಪುರಸ್ಕೃತ ರೊದ್ದಂ ನರಸಿಂಹ (87) ಅವರು ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬ್ರೈನ್ ಹ್ಯಾಮರೇಜ್‌ಗೆ ಒಳಗಾಗಿದ್ದ ಅವರನ್ನು ಡಿ. 8ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (ಎನ್‌ಎಎಲ್) ಮಾಜಿ ನಿರ್ದೇಶಕರಾಗಿದ್ದ ರೊದ್ದಂ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ರೊದ್ದಂ ನರಸಿಂಹ ಅವರು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 8.30ರ ವೇಳೆಗೆ ನಿಧನರಾದರು.
'ಅವರನ್ನು ಆಸ್ಪತ್ರೆಗೆ ಕರೆತರುವ ಸಂದರ್ಭದಲ್ಲಿ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರ ಮೆದುಳಿನ ಒಳಗೆ ರಕ್ತಸ್ರಾವವಾಗುತ್ತಿತ್ತು. ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು ಮತ್ತು 2018ರಲ್ಲಿ ಬ್ರೈನ್ ಸ್ಟ್ರೋಕ್‌ಗೆ ಕೂಡ ಒಳಗಾಗಿದ್ದರು' ಎಂದು ಎಂಎಸ್ ರಾಮಯ್ಯ ಆಸ್ಪತ್ರೆಯ ನ್ಯೂರೋಸರ್ಜನ್ ಡಾ. ಫರ್ಟಡೊ ತಿಳಿಸಿದ್ದಾರೆ.

1933ರ ಜುಲೈ 20ರಂದು ಜನಿಸಿದ ಅವರು, ಏರೋಸ್ಪೇಸ್ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ್ದರು. ಐಐಎಸ್‌ಸಿಯಲ್ಲಿ 1962-1999ರವರೆಗೆ ಏರೋಸ್ಪೇಸ್ ಎಂಜಿನಿಯರಿಂಗ್ ಬೋಧಿಸಿದ್ದರು. 1984ರಿಂದ 1993ರವರೆಗೆ ಎನ್‌ಎಎಲ್‌ನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಬೆಂಗಳೂರಿನ ಜವಹರಲಾಲ್ ನೆಹರೂ ಆಧುನಿಕ ವೈಜ್ಞಾನಿಕ ಸಂಶೋಧನಾ ಸಂಸ್ಥೆಯಲ್ಲಿ (ಜೆಎನ್‌ಸಿಎಎಸ್‌ಆರ್) ಎಂಜಿನಿಯರಿಂಗ್ ಮೆಕ್ಯಾನಿಕ್ ಘಟಕದ ಮುಖ್ಯಸ್ಥರಾಗಿದ್ದರು. ಅವರ ಗಣನೀಯ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಅವರಿಗೆ 2013ರಲ್ಲಿ ಪದ್ಮವಿಭೂಷಣ ಪುರಸ್ಕಾರ ನೀಡಿತ್ತು.
Recommended Video
ರೊದ್ದಂ ಅವರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಬಹಳ ಆಪ್ತರಾಗಿದ್ದರು. ಇಬ್ಬರೂ ಜತೆಗೂಡಿ 'ಡೆವಲಪ್‌ಮೆಂಟ್ಸ್ ಇನ್ ಫ್ಲೂಯೆಡ್ ಮೆಕಾನಿಕ್ಸ್ ಆಂಡ್ ಸ್ಪೇಸ್ ಟೆಕ್ನಾಲಜಿ' ಎಂಬ ಪುಸ್ತಕ ಬರೆದಿದ್ದರು. ಭಾರತೀಯ ರಾಕೆಟ್ ವಿಜ್ಞಾನಿ ಪ್ರೊ. ಸತೀಶ್ ಧವನ್ ಅವರ ಮೊದಲ ವಿದ್ಯಾರ್ಥಿ ಹಾಗೂ ಭಾರತ ರತ್ನ ಡಾ. ಸಿಎನ್‌ಆರ್ ರಾವ್ ಅವರ ಗೆಳೆಯರಾಗಿದ್ದರು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications