ಸಿದ್ದರಾಮಯ್ಯ ಎದುರು ಗಳಗಳನೆ ಅತ್ತ ಎಂ.ಬಿ ಪಾಟೀಲ್

Recommended Video

      ಸಿದ್ದರಾಮಯ್ಯ ಎದುರು ಗೊಳೋ ಅಂತ ಅತ್ತ ಎಂ ಬಿ ಪಾಟೀಲ್ | Oneindia Kannada

      ಬೆಂಗಳೂರು, ಜೂನ್ 7: ಸಚಿವ ಸಂಪುಟದಲ್ಲಿ ಅವಕಾಶ ನೀಡದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ‌ ಮಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಗಳಗಳನೆ ಅತ್ತ ಘಟನೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

      ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮುಂದುವರೆದಿದೆ. ಎಂ.ಬಿ ಪಾಟೀಲ್ ನಿವಾಸದಲ್ಲಿ ಪ್ರಮುಖರ ಸಭೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಎಂಬಿ ಪಾಟೀಲ್ ಕಣ್ಣೀರು ಹಾಕಿದ್ದಾರೆ.

      ಪಟ್ಟಿಯಲ್ಲಿ ಹೆಸರಿದ್ದರೂ ಕೊನೆಯ ಘಳಿಗೆಯಲ್ಲಿ ಯಾಕೆ ಕೈಬಿಟ್ಟಿದ್ದಾರೆ, ಸಮಾಜಕ್ಕಾಗಿ, ಪಕ್ಷಕ್ಕಾಗಿ ನಾನು ಶ್ರಮಿಸಿದ್ದೇನೆ, ನನ್ನನ್ನು ಪಕ್ಷ ಕಡೆಗಣಿಸಿದ್ದು ಎಷ್ಟು ಸರಿ ಎಂದು ಭಾವೋದ್ವೇಗಕ್ಕೆ ಒಳಗಾದ ಅಳುತ್ತಲೇ ಕಾವೇರಿಯಿಂದ ಎಂಬಿ ಪಾಟೀಲ್ ತೆರಳಿದ್ದಾರೆ.

      Emotional MB Patil meets former CM Siddaramaiah

      ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಮೊದಲ ಹಂತದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದ್ದರಿಂದ, ಅವರು ಅಸಮಾಧಾನಗೊಂಡಿದ್ದಾರೆ. ಮಾಜಿ ಸಚಿವರ ಬೆಂಬಲಿಗರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+