ಬೆಂಗಳೂರು : ಎಂಪೈರ್ ಹೋಟೆಲ್, ಸ್ವಿಗ್ಗಿ ಡೆಲಿವರಿ ಬಾಯ್ಸ್‌ ಕಿತ್ತಾಟ

ಬೆಂಗಳೂರು, ಜನವರಿ 13 : ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿ ಎಂಪೈರ್ ಹೋಟೆಲ್ ಮತ್ತು ಸ್ವಿಗ್ಗಿ ಡೆಲಿವರಿ ಬಾಯ್ಸ್‌ ನಡುವೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಎಂಪೈರ್ ಹೋಟೆಲ್ ಮ್ಯಾನೇಜರ್ ಮತ್ತು ಸ್ವಿಗ್ಗಿ ಡೆಲಿವರಿ ಬಾಯ್ ನಡುವೆ ಗಲಾಟೆ ನಡೆದಿದೆ. ಈ ವೇಳೆ ಡೆಲಿವರಿ ಬಾಯ್ ಹರೀಶ್ ಮೇಲೆ ಹಲ್ಲೆ ನಡೆದಿದೆ. ಮೈಕೋ ಲೇಔಟ್ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು.

ಹರೀಶ್ ಮೇಲೆ ಉತ್ತರ ಭಾರತದವರು ದಬ್ಬಾಳಿಕೆ ಮಾಡಿದ್ದಾರೆ ಎಂದು ಸ್ವಿಗ್ಗಿ ಡೆಲಿವರಿ ಬಾಯ್ಸ್‌ ಆರೋಪ ಮಾಡಿದ್ದು, ಎಂಪೈರ್ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಜನರನ್ನು ವಶಕ್ಕೆ ಪಡೆಯಲಾಗಿದೆ.

Empire and Swiggy employees clash in Bengaluru

ತಡರಾತ್ರಿ 2 ಗಂಟೆ ಸುಮಾರಿಗೆ ಹರೀಶ್ ಹೋಗುತ್ತಿದ್ದ ಬೈಕ್ ಎಂಪೈರ್ ಹೋಟೆಲ್ ಮ್ಯಾನೇಜರ್ ಬೈಕ್‌ಗೆ ತಾಗಿತ್ತು. ಈ ವಿಚಾರಕ್ಕೆ ಆರಂಭವಾದ ಗಲಾಟೆ ಕಲ್ಲು ತೂರಾಟದ ತನಕ ಹೋಗಿದೆ.

50ಕ್ಕೂ ಹೆಚ್ಚು ಸ್ವಿಗ್ಗಿ ಡೆಲಿವರಿ ಬಾಯ್ಸ್‌ಗಳು ಎಂಪೈರ್ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಾಜುಗಳನ್ನು ಪುಡಿ ಮಾಡಿದ್ದಾರೆ. ಮೈಕೋ ಲೇಔಟ್ ಪೊಲೀಸರು ಪ್ರಕರಣದ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+