ನಿರುದ್ಯೋಗ ಸಮಸ್ಯೆ ಬಗೆಹರಿಸಲಾಗುವುದು, ಇದು ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಬೆಂಗಳೂರು, ಮೇ. 28: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್ ಐದು ಗ್ಯಾರೆಂಟಿಗಳನ್ನು ಜಾರಿಗೆ ತರುವ ವಿಶ್ವಾಸ ವ್ಯಕ್ತಪಡಿಸಿದೆ. ಇದರ ಜೊತೆಗೆ ರಾಜ್ಯ ಸರ್ಕಾರದ ಆದ್ಯತೆಯಂತೆ ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭರವಸೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿಯಾದ ಉದ್ಯೋಗ ಆಕಾಂಕ್ಷಿಗಳ ಗುಂಪಿನೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, '' ಜನರಿಗೆ ಉದ್ಯೋಗ ನೀಡುವುದು ನಮ್ಮ ಕರ್ತವ್ಯವಾಗಿರುವುದರಿಂದ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದ್ದೇವೆ. ಅರ್ಹರಿಗೆ, ಉದ್ಯೋಗ ಸಮಸ್ಯೆ ಬಗೆಹರಿಯುವಂತೆ ನೋಡಿಕೊಳ್ಳಬೇಕು. ಅದು ನಮ್ಮ ಸರ್ಕಾರದ ಆದ್ಯತೆಯಾಗಿದೆ" ಎಂದು ಹೇಳಿದ್ದಾರೆ.

DCM DK Shivakumar

ನಾವು ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಮೇಲೆ ಕೆಲಸ ಮಾಡಲು ಪ್ರಾರಂಭಿಸುತ್ತೇವೆ. ಇದನ್ನು 1 ಅಥವಾ 2 ದಿನಗಳಲ್ಲಿ ಮಾಡಲಾಗುತ್ತದೆ ಎಂದು ನಾನು ಹೇಳಲಾರೆ ಆದರೆ ಖಂಡಿತ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪವರ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿ 1,500ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾನುವಾರ ಬೆಂಗಳೂರಿನಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಉದ್ಯೋಗ ನೀಡುವಂತೆ ಆಗ್ರಹಿಸಿದ್ದಾರೆ.

DCM DK Shivakumar

ಕರ್ನಾಟಕ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಐದು ಭರವಸೆಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಮಾತನಾಡಿ, ಚುನಾವಣೆಗೂ ಮುನ್ನ ಪಕ್ಷ ನೀಡಿದ್ದ ಐದು ಭರವಸೆಗಳ ಅನುಷ್ಠಾನಕ್ಕೆ ಮೊದಲ ಸಚಿವ ಸಂಪುಟ ಸಭೆಯೇ ಆದೇಶ ನೀಡಿದೆ.

ಐದು ಮುಖ್ಯ ಗ್ಯಾರೆಂಟಿಗಳು:

* ಗೃಹ ಜ್ಯೋತಿ: ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್

* ಗೃಹ ಲಕ್ಷ್ಮಿ: ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂಪಾಯಿ ಮಾಸಿಕ ನೆರವು

* ಅನ್ನ ಭಾಗ್ಯ: ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ

* ಯುವನಿಧಿ: ಎರಡು ವರ್ಷಗಳವರೆಗೆ ನಿರುದ್ಯೋಗಿ ಪದವೀಧರ ಯುವಕರಿಗೆ ಪ್ರತಿ ತಿಂಗಳು 3,000 ಸಾವಿರ ರೂ. ಮತ್ತು ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ 1,500 ರೂಪಾಯಿ. ಇಬ್ಬರೂ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.

* ಉಚಿತ ಪ್ರಯಾಣ: ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+