ಚಿನ್ನದ ಬೆಲೆ ಇರುವ ಭೂಮಿಗೆ ಆಘಾತ, 68 ಕೋಟಿ ರೂಪಾಯಿ ಮೌಲ್ಯದ ಭೂಮಿ ದಿಢೀರ್... Bengaluru Property
ಬೆಂಗಳೂರು ಇಡೀ ಜಗತ್ತಿನಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇದೇ ನಮ್ಮ ಕನ್ನಡಿಗರ ರಾಜಧಾನಿ ಬೆಂಗಳೂರಿನಲ್ಲಿ ಒಂದೊಂದು ಇಂಚು ಭೂಮಿಗೂ ಚಿನ್ನ ಮೀರಿಸುವಷ್ಟು ಬೆಲೆ ಈಗ ಬಂದಿದೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಭೂಮಿ ಕದಿಯುವ ಕಳ್ಳರ ಸಂಖ್ಯೆ ಭಾರಿ ಹೆಚ್ಚಾಗಿ ಸರ್ಕಾರದ ಭೂಮಿ ಕಳ್ಳರ ಪಾಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗಳ್ಳರಿಗೆ ಭಯ ಶುರುವಾಗಿದ್ದು, ಸರ್ಕಾರ ತೀವ್ರ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಭೂಮಿ ರಕ್ಷಣೆ ಮಾಡಿದೆ. ಹೀಗಿದ್ದಾಗಲೇ ಚಿನ್ನದ ಬೆಲೆ ಇರುವ ಭೂಮಿಗೆ ಆಘಾತ, 68 ಕೋಟಿ ರೂಪಾಯಿ ಮೌಲ್ಯದ ಭೂಮಿ ದಿಢೀರ್...
ರಾಜಧಾನಿಯಲ್ಲಿ ಭೂಗಳ್ಳರ ಕಾಟ ಇನ್ನಿಲ್ಲದಂತೆ ಹೆಚ್ಚಾಗಿರುವ ಕಾರಣಕ್ಕೆ ಇದೀಗ ಕ್ರಮ ಕೈಗೊಂಡು ಜಿಲ್ಲಾಡಳಿತದ ವತಿಯಿಂದ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿ ಬಿಸಿ ಮುಟ್ಟಿಸಲಾಗುತ್ತಿದ್ದು, ಇಂದೂ ಬೆಂಗಳೂರಿನ ಮೂಲೆ ಮೂಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹಲವೆಡೆ ಒತ್ತುವರಿ ಮಾಡಿಕೊಂಡಿದ್ದ ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಭಾರಿ ದೊಡ್ಡ ಪ್ರಮಾಣದ ಸರ್ಕಾರಿ ಭೂಮಿ ರಕ್ಷಣೆ ಮಾಡಲಾಗಿದೆ. ಅದರಲ್ಲೂ ಒಂದೇ ದಿನ 68 ಕೋಟಿ ರೂಪಾಯಿ ಮೌಲ್ಯದ ಭೂಮಿ ರಕ್ಷಣೆಯಾಗಿದೆ.

ಚಿನ್ನದ ಬೆಲೆ ಇರುವ ಭೂಮಿಗೆ ಆಘಾತ!
ಹೌದು, ಬೆಂಗಳೂರಲ್ಲಿ ಭೂಮಿಗೆ ಚಿನ್ನದ ಬೆಲೆ ಬಂದಿದೆ ಅಂತಾ ಒತ್ತುವರಿ ಮಾಡಿಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ಮೂಲಕ ಚಿನ್ನದ ಬೆಲೆ ಇರುವ ಭೂಮಿಗೆ ಆಘಾತ ಸಿಗುತ್ತಿದೆ. ಆದರೆ ಇದನ್ನೆಲ್ಲಾ ಸರಿ ಮಾಡಲು ಬೆಂಗಳೂರು ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಸಾವಿರಾರು ಕೋಟಿ ರೂಪಾಯಿ ಬೆಲೆ ಬಾಳುವ ಜಮೀನು ರಕ್ಷಣೆ ಮಾಡುತ್ತಿದ್ದಾರೆ. ಇದೇ ರೀತಿಯಾಗಿ ಇಂದು ಒಂದೇ ದಿನ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 68.61 ಕೋಟಿ ರೂಪಾಯಿ ಅಂದಾಜು ಮೌಲ್ಯದ ಭೂಮಿ ರಕ್ಷಣೆಯಾಗಿದೆ.
ಒತ್ತುವರಿ ಮಾಡಿಕೊಂಡ ಭೂಗಳ್ಳರಿಗೆ ಮಾರಿಹಬ್ಬ!
ಬೆಂಗಳೂರು ನಗರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಆಯಾ ತಾಲೂಕುಗಳ ತಹಶೀಲ್ದಾರ್ & ಸರ್ಕಾರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಗೊಕಟ್ಟೆ, ಸರ್ಕಾರಿ ಕುಂಟೆ ಮತ್ತು ಗೋಮಾಳ, ಖರಾಬು, ಖರಾಬು ಕೆರೆ ಪ್ರದೇಶಕ್ಕೆ ಎಂಟ್ರಿ ಕೊಟ್ಟು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಪೂರ್ವ ತಾಲೂಕು, ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ತಾಲೂಕು ಸೇರಿದಂತೆ ಯಲಹಂಕ ತಾಲೂಕಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಬೆಂಗಳೂರಿನ ಇತರ ಭಾಗಗಳಲ್ಲೂ ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರಿಗೆ ಇದೀಗ ಸಿದ್ದರಾಮಯ್ಯ ಅವರ ಸರ್ಕಾರದ ಅಧಿಕಾರಿಗಳು ವಾರ್ನಿಂಗ್ ಕೊಟ್ಟಿದ್ದಾರೆ.












Click it and Unblock the Notifications