ಶಿವಾಜಿನಗರದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಒತ್ತುವರಿ ತೆರವು

ಬೆಂಗಳೂರು, ಮೇ 04: ನಗರದ ಶಿವಾಜಿನಗರ ರಸೂಲ್ ಮಾರುಕಟ್ಟೆಯಲ್ಲಿ ಇಂದು ಬೆಳ್ಳಂಬೆಳ್ಳಿಗೆ ಅಕ್ರಮ ಒತ್ತುವರಿ ತೆರವು ಮಾಡಲಾಗಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಈ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಒತ್ತುವರಿ ತೆರವಿನ ನೇತೃತ್ವ ವಹಿಸಿದ್ದ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಅವರು ತಿಳಿಸಿದ್ದಾರೆ.

ಒತ್ತುವರಿ ತೆರವಿಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು, ರಸೂಲ್ ಮಾರುಕಟ್ಟೆ ಸೂಕ್ಷ್ಮ ಪ್ರದೇಶವಾಗಿದ್ದು, ಸುಮಾರು 700 ತಂಡಗಳು ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಬೆಳ್ಳಂಬೆಳಿಗ್ಗೆ ಹಲವು ಜೆಸಿಬಿಗಳನ್ನು ತಂದು ಒತ್ತುವರಿಯನ್ನು ತೆರವು ಮಾಡಲಾಯಿತು.

Encrochment clearence in Shivajinagar by BBMP

ನ್ಯಾಯಾಲಯದ ಆದೇಶದ ಮೇರೆಗೆ ಈ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು , ಭವಿಷ್ಯದಲ್ಲಿ ಯಾವುದೇ ಅನಧಿಕೃತ ಮಳಿಗೆ ತಲೆ ಎತ್ತಲು ಅವಕಾಶ ನೀಡುವುದಿಲ್ಲ ಎಂದು ವಿಶೇಷ ಆಯುಕ್ತ ರವೀಂದ್ರ ಸುದ್ದಿಗಾರರಿಗೆ ತಿಳಿಸಿದರು.

ರಸೂಲ್ ಮಾರ್ಕೆಟ್ ನಲ್ಲಿ ಒಟ್ಟು 421 ಮಳಿಗೆಗಳಿದ್ದು ಸೂಕ್ಷ್ಮ ಪ್ರದೇಶವಾಗಿರುವ ಕಾರಣ ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ಹಾಗೂ 60 ಕ್ಕೂ ಹೆಚ್ಚಿನ ಮಾರ್ಷಲ್ ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಮಾರ್ಕೆಟ್‌ನಲ್ಲಿ ಅನಧಿಕೃತ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+