ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆ ಶಿವಕುಮಾರ್‌ಗೆ ಇಡಿಯಿಂದ ಸಮನ್ಸ್ ಜಾರಿ, ಏನಿದು ಪ್ರಕರಣ?

|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಗೆ ಬಂತು ಮತ್ತೊಂದು ಸಂಕಷ್ಟ | ಏನಿದು ಪ್ರಕರಣ? | Oneindia Kannada

ಬೆಂಗಳೂರು, ಫೆಬ್ರವರಿ 2: ಸಚಿವ ಡಿಕೆ ಶಿವಕುಮಾರ್‌ಗೆ ಅವರು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ. ದೆಹಲಿಯ ಫ್ಲ್ಯಾಟ್​ ಮೇಲೆ ದಾಳಿ ಮಾಡಿದಾಗ 8.59 ಕೋಟಿ ರೂ. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್​ ಜಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಇದರಿಂದಾಗಿ ಲೋಕಸಭೆ ಚುನಾವಣೆಗೂ ಮುನ್ನ ಡಿ.ಕೆ. ಶಿವಕುಮಾರ್​ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರು?ಇಡಿ ಬಂಧನ ಭೀತಿಯಿಂದ ಡಿಕೆಶಿ ಸೇಫ್? ಕಾಂಗ್ರೆಸ್ಸಿನ ಆ ಆಪತ್ಬಾಂಧವ ಯಾರು?

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದೆ. ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್ ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಿಸಲಾಗಿತ್ತು.

ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಡಿಕೆಶಿ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದಾರೆ. ಸಮನ್ಸ್ ಆಧರಿಸಿ ನಿರೀಕ್ಷಣಾ ಜಾಮೀನಿನ ಅರ್ಜಿಗೆ ತಯಾರಿ ಮಾಡಿಕೊಳ್ಳಲಿದ್ದಾರೆ.

Enforcement directorate summons to DK shivakumar

ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು.

ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್ಬಂಧನ ಭೀತಿ ಇಲ್ಲ : ವರಸೆ ಬದಲಿಸಿದ ಡಿ.ಕೆ.ಶಿವಕುಮಾರ್

ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು.

English summary
Enforcement directorate issued summons to minister DK shivakumar regarding money laundering and other case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X