ಬೆಂಗಳೂರು ಕಾಲೇಜು ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಡಿಸೆಂಬರ್ 15: ಬೆಂಗಳೂರಿನ ಆನೇಕಲ್ ಪಟ್ಟಣದ ಕಾಲೇಜೊಂದರಲ್ಲಿ ಓದುತ್ತಿದ್ದ ಕೇರಳ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಮೃತನನ್ನು ಬೆಂಗಳೂರಿನ ಬನ್ನೇರುಘಟ್ಟ ಪ್ರದೇಶದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. 19 ವರ್ಷದ ಈತನ ಹೆಸರು ನಿತಿನ್ . ಈತ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಪದಿನಿ ಜರಿಯಾ ಪ್ರದೇಶದ ಬಳಿಯ ಕೊಯಲಾಂಡಿ ಗ್ರಾಮದವನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಿತಿನ್ ಪೋಷಕರು ದುಬೈನಲ್ಲಿ ನೆಲೆಸಿದ್ದಾರೆ ಮತ್ತು ಆತನ ಸಹೋದರ ಅವರನ್ನು ಕಾಲೇಜಿಗೆ ಸೇರಿಸಿದ್ದನು. ಪೋಷಕರ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರ ಪ್ರಕಾರ, ನಿತಿನ್ ಡಿಸೆಂಬರ್ 1 ರಂದು ಕಾಲೇಜಿಗೆ ಸೇರಿಕೊಂಡರು. ಮೊದಲ ವರ್ಷ ಸಿಇಎಸ್ ಕೋರ್ಸ್ ತೆಗೆದುಕೊಂಡರು. ಕಾಲೇಜಿನ ಶೌಚಾಲಯದ ಕೊಠಡಿಯಲ್ಲಿಯೇ ನಿತಿನ್ ಚಾಕುವಿನಿಂದ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನಿಖೆ ಕೈಗೆತ್ತಿಕೊಂಡಿರುವ ಬನ್ನೇರುಘಟ್ಟ ಪೊಲೀಸರು, ನಿತಿನ್ ಪೋಷಕರಿಂದ ದೂರ ಉಳಿದಿದ್ದರಿಂದ ಖಿನ್ನತೆಗೆ ಒಳಗಾಗಿದ್ದನು. ಕಾಲೇಜಿಗೆ ಸೇರಿದ ನಂತರ ಅವರಿಗೆ ಪದೇ ಪದೇ ಕರೆ ಮಾಡುತ್ತಿದ್ದನು. ರೂಮಿನಲ್ಲಿ ಒಬ್ಬನೇ ಇರಲು ಬಯಸುತ್ತಿದ್ದನು. ಶಾಂತವಾಗಿರುತ್ತಿದ್ದನು ಎಂದು ಹೇಳಿದ್ದಾರೆ. ಆದರೆ, ನಿತಿನ್ ಆತ್ಮಹತ್ಯೆ ಮಾಡಿಕೊಂಡಿರುವುದು ಯಾವ ಕಾರಣದಿಂದ ಎಂಬುದು ಪೊಲೀಸರ ತನಿಖೆಯಿಂದ ಸ್ಪಷ್ಟವಾಗಲಿದೆ.
ಈತನ ರೂಮ್‌ಮೇಟ್ ಹಾಗೂ ಕಾಲೇಜಿನ ಸ್ನೇಹಿತರಿಂದ ಪೊಲೀಸರು ಹೇಳಿಕೆ ಸಂಗ್ರಹಿಸಿದ್ದಾರೆ. ನಿತಿನ್ ತನ್ನ ಪೋಷಕರಿಗೆ ಕರೆ ಮಾಡುತ್ತಿದ್ದು, ತನ್ನನ್ನು ನೋಡಲು ಬನ್ನಿ ಎಂದು ಅವರೊಂದಿಗೆ ಜಗಳವಾಡುತ್ತಿದ್ದ. ಆತ ತನ್ನ ಪೋಷಕರ ಮೇಲೆ ಕೋಪಗೊಳ್ಳುತ್ತಿದ್ದ ಎಂದು ವಿದ್ಯಾರ್ಥಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
***
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications