ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಮಾರ್ಚ್ 1: ಪ್ರತಿಷ್ಠಿತ ಕಾಲೇಜಿನ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿವಿಪುರಂ ನಲ್ಲಿರುವ ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತ್ ರೆಡ್ಡಿ ಮೃತಪಟ್ಟ ದುರ್ದೈವಿ.
ಎಂದಿನಂತೆ ಪ್ರಯೋಗಾಲಕ್ಕೆ ಬಂದಿದ್ದ ಜಯಂತ್ ರೆಡ್ಡಿ ಕಟ್ಟಡದ ಮೇಲಿನಿಂದ ಜಿಗಿದು ಬಿದ್ದಿದ್ದಾನೆ ತಲೆಗೆ ತೀವ್ರ ತರ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಜಯಂತರೆಡ್ಡಿ ಮೂರನೇ ಸೆಮ್ ಪರೀಕ್ಷೆ ಬರೆಯಬೇಕಿತ್ತು. ಶಾಲಾ ಶುಲ್ಕ ಪಾವತಿಸದ ಬಗ್ಗೆ ಬೇಸರಗೊಂಡಿದ್ದ ಜಯಂತ್ ರೆಡ್ಡಿ ಪರೀಕ್ಷೆ ಬರೆಯುವ ಬಗ್ಗೆ ಒತ್ತಡಕ್ಕೆ ಒಳಗಾಗಿದ್ದ ಎಂಬ ಪ್ರಾಥಮಿಕ ಮಾಹಿತಿ ಬೆಳಕಿಗೆ ಬಂದಿದೆ. ಇನ್ನು ಜಯಂತ್ ರೆಡ್ಡಿ ಆತ್ಮಹತ್ಯೆ ಬಗ್ಗೆ ಬಿಐಟಿ ಮೌನಕ್ಕೆ ಶರಣಾಗಿದ್ದು, ಆತ್ಮಹತ್ಯೆಯ ಸುತ್ತ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಶಾಲಾ ಶುಲ್ಕ ಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲವೇ ಪರೀಕ್ಷೆ ಬರೆಯಲಾರದೇ ಖಿನ್ನತೆಗೆ ಒಳಗಾಗಿದ್ದನೇ ಎಂಬ ಸಂಶಯ ಮೂಡಿದೆ. ಜಯಂತ್ ರೆಡ್ಡಿ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಸಂಗತಿ ವಿದ್ಯಾರ್ಥಿ ಸಮುದಾಯವನ್ನು ಬೆಚ್ಚಿ ಬೀಳಿಸಿದ್ದು, ಆಡಳಿತ ಮಂಡಳಿಯೇ ಜಯಂತ್ ಆತ್ಮಹತ್ಯೆಗೆ ಕಾರಣ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆನ್‌ಲೈನ್ ಪಾಠದಿಂದ ನಮಗೆ ಅರ್ಥವಾಗುತ್ತಿಲ್ಲ. ಕೊರೋನಾ ಬಳಿಕ ಆನ್‌ಲೈನ್ ಕ್ಲಾಸ್ ಗಳಿಗೆ ಪಾಠ ಸೀಮಿತವಾಗಿತ್ತು. ಆನ್‌ಲೈನ್ ನಿಂದ ಪಾಠ ಅರ್ಥವಾಗಿಲ್ಲ. ಈಗಾಗಲೇ ಪರೀಕ್ಷೆ ಎದುರಾಗಿದೆ. ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನಾವು ಆತ್ಮಹತ್ಯೆ ಮಾಡಿಕೊಂಡಿಲ್ಲ ಅಷ್ಟೇ. ತರಗತಿಗಳು ಕೇವಲ ಪ್ರಯೋಗಾಲಯಕ್ಕೆ ಸೀಮಿತವಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವರು ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications