ಬಾವಿಯೊಳಗೆ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಬೆಂಗಳೂರು, ಮೇ 26: ಈಜು ಬಾರದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪ್ರವೀಣ್ ತನ್ನ ಐದು ಜನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಆನೇಕಲ್ ಸಮೀಪದ ಸೀತನಾಯ್ಕನಹಳ್ಳಿ ಬಂದಿದ್ದರು, ಮೋಜು ಮಸ್ತಿಯಲ್ಲಿ ತೊಡಗಿದ್ದರು.

ಆ ಹುಮ್ಮಸ್ಸಿನಲ್ಲಿ ಹತ್ತಿರದಲ್ಲಿದ್ದ ಬಾವಿಯಲ್ಲಿ ಸ್ನೇಹಿತರೆಲ್ಲಾ ಈಜಾಡಿದ್ದಾರೆ. ಈಜು ಬಾರದಿದ್ದರೂ ಪ್ರವೀಣ್ ಬಾವಿಗೆ ದುಮುಕಿದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications