ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಶಾಲೆಗಳಲ್ಲಿ ಶೀಘ್ರ ಆಂಗ್ಲ ಮಾಧ್ಯಮ ಶಿಕ್ಷಣ

By Nayana
|
Google Oneindia Kannada News

ಬೆಂಗಳೂರು, ಮೇ 26: ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದಾಗಿ ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಹೀಗಾಗಿ ಅವುಗಳನ್ನು ಉಳಿಸಿಕೊಳ್ಳುವುದು ಹಾಗೂ ಬಿಬಿಎಂಪಿ ಶಾಲೆಗಳೂ ಯಾವುರಲ್ಲಿಯೂ ಕಡಿಮೆಯಿಲ್ಲ ಎನ್ನುವುದನ್ನು ಮನದಟ್ಟು ಮಾಡಲು ನೂತನ ಕ್ರಮ ಕೈಗೊಂಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿದೆ. ಹೀಗಾಗಿ ತನ್ನ ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಲು ಬಿಬಿಎಂಪಿ ನಿರ್ಧರಿಸಿದೆ. ಹಾಗಾಗಿ ಖಾಸಗಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಆಂಗ್ಲ ಮಾಧ್ಯಮ ಶಿಕ್ಷಣದ ಬಗ್ಗೆಯೂ ತಿಳಿದುಕೊಳ್ಳುತ್ತಿದೆ. ಅಲ್ಲದೆ ಶಿಕ್ಷಕರಿಗೂ ಈ ಬಗ್ಗೆ ತಿಳಿಸಿದೆ.

1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 5ವರ್ಷ 5 ತಿಂಗಳು, ಗರಿಷ್ಠ 7 ವರ್ಷ!1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 5ವರ್ಷ 5 ತಿಂಗಳು, ಗರಿಷ್ಠ 7 ವರ್ಷ!

ಯೋಜನೆಯಂತೆ ಮೊದಲು ನರ್ಸರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲಾಗುತ್ತಿದೆ. ಬಿಬಿಎಂಪಿ ನಿರ್ವಹಣೆಯಲ್ಲಿನ 89 ನರ್ಸರಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ನೀಲಾಗುತ್ತದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ನರ್ಸರಿ ಶಾಲೆಗಳಲ್ಲಿ 3,520 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ.

English medium education in BBMP schools too

2018-19ನೇ ಸಾಲಿನಲ್ಲಿ ಆ ಸಂಖ್ಯೆಯನ್ನು ಹೆಚ್ಚಳ ಮಾಡುವ ಕುರಿತು ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಂದಾಜಿಸಿದೆ. ಈ ಸಾಲಿನಲ್ಲಿ ನರ್ಸರಿ ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲಾಗುತ್ತದೆ. ಈ ವರ್ಷದಲ್ಲಿ ಶೈಕ್ಷಣಿಕವಾಗಿ ಮಕ್ಕಳ ಬೆಳವಣಿಗೆ ಗಮನಿಸಿ ಮುಂದಿನ ಸಾಲಿನಿಂದ 41ರಿಂದ 10ನೇ ತರಗತಿವರೆಗೆ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ. ಆದರೆ, ನರ್ಸರಿ ಮಕ್ಕಳು ಮುಂದಿನ ವರ್ಷ 1ನೇ ತರಗತಿಗೆ ದಾಖಲಾಗುವುದರಿಂದ ಅವರಿಗೆ ಆಂಗ್ಲ ಮಾಧ್ಯಮ ತೊಂದರೆಯಾಗುವುದಿಲ್ಲ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗಂಗಮ್ಮ ರಾಜಣ್ಣ ತಿಳಿಸಿದ್ದಾರೆ.

ನರ್ಸರಿ ಶಾಲೆಗಳ ಸಂಖ್ಯೆ 89ಇದ್ದು ಅದರಲ್ಲಿ 3,520 ವಿದ್ಯಾರ್ಥಿಗಳಿದ್ದಾರೆ. ಪ್ರಾಥಮಿಕ ಶಾಲೆಗಳ ಸಂಖ್ಯೆ 14 ಇದ್ದು ಅದರಲ್ಲಿ 1,682 ಮಂದಿ ವಿದ್ಯಾರ್ಥಿಗಳಿದ್ದಾರೆ ಇನ್ನು ಪ್ರೌಢಶಾಲೆಗಳ ಸಂಖ್ಯೆ 32 ಇದ್ದು ಅದರಲ್ಲಿ 5,456 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

English summary
To compete with the private English medium schools in Bangalore, BBMP has decided to open English medium section in its schools from this academic year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X