ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮಹಿಳೆಯರ ನವೋದ್ಯಮಕ್ಕೆ ಪ್ರೋತ್ಸಾಹ ಎಂದ ಸಚಿವ ಸುಧಾಕರ್

|
Google Oneindia Kannada News

ಬೆಂಗಳೂರು, ಮಾರ್ಚ್ 15: ಕರ್ನಾಟಕದ ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯಾವುದೇ ಸಮಾಜವು ಅಭಿವೃದ್ಧಿ ಕಾಣಬೇಕಾದರೆ ಮಹಿಳೆಯರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ನೀಡಬೇಕು ಎಂದರು.

ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಟ್ಲಾಸ್, ಪಹಣಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಿಲ್ಲ!ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಟ್ಲಾಸ್, ಪಹಣಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಿಲ್ಲ!

ಮಹಿಳೆ ಬಾಲ್ಯದಿಂದಲೇ ಹೋರಾಟ ಶುರುವಾಗುತ್ತದೆ. ಸಮಾಜದಲ್ಲಿ ಲಿಂಗ ಸಮಾನತೆಗಾಗಿ ಹೋರಾಟ, ಕೆಲವು ಸಂದರ್ಭದಲ್ಲಿ ಕುಟುಂಬದಲ್ಲೂ ಹಕ್ಕುಗಳಿಗಾಗಿ ಹೋರಾಟ ಸೇರಿದಂತೆ ಮಹಿಳೆಯ ಹೋರಾಟ ನಿರಂತರವಾಗಿ ಇರುತ್ತದೆ. ಆದರೆ ಯಾವುದೇ ಸಮಾಜ ಸಂಪೂರ್ಣ ಅಭಿವೃದ್ಧಿ ಕಾಣಬೇಕೆಂದರೆ ಮಹಿಳೆಯರಿಗೆ ಸಂಪೂರ್ಣ ಅವಕಾಶ, ಹಕ್ಕುಗಳನ್ನು ನೀಡಬೇಕಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

Equal rights for women to have any social development, Say Health Minister Dr K Sudhakar

ಮಹಿಳೆಯರ ಜನಸಂಖ್ಯೆಯಲ್ಲಿ ಗಣನೀಯ ಏರಿಕೆ:

ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮ ಆರಂಭಿಸಿದರು. ಇದರ ಜೊತೆ ಭೇಟಾ ಸಮ್ಜಾವೋ ಎಂಬುದನ್ನೂ ಸೇರಿಸಲಾಯಿತು. ಇದು ಲಿಂಗ ಅಸಮಾನತೆ ನಿವಾರಿಸಲು ನೆರವಾಗಿದೆ. 2015-16 ರಲ್ಲಿ 1,000 ಪುರುಷರಿಗೆ ಮಹಿಳೆಯರ ಸಂಖ್ಯೆ 840 ಇತ್ತು. 2020ರಲ್ಲಿ ಈ ಸಂಖ್ಯೆ 1,040-1,050 ಆಗಿದೆ. ಅಂದರೆ ಐದು ವರ್ಷಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ದೇಶವು ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ.

ಮಹಿಳಾ ನವೋದ್ಯಮಗಳಿಗೆ ಉತ್ತೇಜನ:

ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಿದೆ. ಮಹಿಳಾ ನವೋದ್ಯಮಗಳು ಕಂಡು ಬರುತ್ತಿದ್ದರೂ, ಅತಿ ಕಡಿಮೆ ಪ್ರಮಾಣದಲ್ಲಿವೆ. ಇದರಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಮಹಿಳೆಯರ ಉದ್ಯಮ ಪ್ರಾರಂಭಕ್ಕೆ ಉತ್ತೇಜನ ನೀಡಬೇಕಾಗುತ್ತದೆ ಎಂದಿದ್ದಾರೆ. ಮಹಿಳೆಯರು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಇಚ್ಛಾಶಕ್ತಿ, ಜ್ಞಾನಶಕ್ತಿ ಹಾಗೂ ಕರ್ಮಶಕ್ತಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳೆಯರು ಉದ್ಯಮಕ್ಕೆ ಬರಲು ಪ್ರೋತ್ಸಾಹ ನೀಡುವುದು. ನಂತರ ಸೂಕ್ತ ಮಾಹಿತಿ ನೀಡುವುದು ಹಾಗೂ ಎಲ್ಲರೂ ಸೇರಿ ಅವರಿಗೆ ನೆರವು ನೀಡುವುದನ್ನು ಇದು ಒಳಗೊಂಡಿದೆ. ಉದ್ಯಮಗಳಲ್ಲಿ ಮಹಿಳೆಯರು ಮುಂಚೂಣಿಗೆ ಬರಲು ಇದೇ ಮೂರು ಪ್ರಮುಖ ಆಧಾರಗಳಾಗಿವೆ ಎಂದರು.

ಶುಶ್ರೂಷಕಿಯರ ಬಗ್ಗೆ ಸಚಿವಲ ಶ್ಲಾಘನೆ:

ಮಹಿಳೆಯರನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ತರಲು ಉತ್ತಮ ಕಾರ್ಯಕ್ರಮ ರೂಪಿಸಬೇಕಿದೆ. ಆರೋಗ್ಯ ಇಲಾಖೆಯಲ್ಲೂ ಮಹಿಳಾ ಸಬಲೀಕರಣ ಮಾಡಲಾಗಿದೆ. ರಾಜ್ಯದಲ್ಲಿ 45 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಕೊವಿಡ್-19 ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಶುಶ್ರೂಷಕಿಯರು ಕೂಡ ರೋಗಿಗಳನ್ನು ತಮ್ಮ ಕುಟುಂಬದಂತೆ ಪರಿಗಣಿಸಿ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.

Recommended Video

DRS , ಬಯೋ-ಬಬಲ್ ಐಪಿಎಲ್ ನಲ್ಲಿ ಸಾಕಷ್ಟು ಬದಲಾವಣೆ | Oneindia Kannada

English summary
Equal rights for women to have any social development, Say Health Minister Dr K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X