Escom Online services: 10 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆ ಬಂದ್, ಎಲ್ಲೆಲ್ಲಿ ಮಾಹಿತಿ ತಿಳಿಯಿರಿ
ಬೆಂಗಳೂರು, ಮಾರ್ಚ್ 06: ಸಾಫ್ಟ್‌ವೇರ್ ಅಪ್‌ಗ್ರೇಡ್ ಕೆಲಸದಿಂದಾಗಿ ಮಾರ್ಚ್ 10 ರಿಂದ 19 ರ ನಡುವೆ 10 ದಿನಗಳ ಕಾಲ ರಾಜ್ಯದಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್‌ಗಳು) ಒದಗಿಸುವ ಆನ್‌ಲೈನ್ ಸೇವೆಗಳು ಸಿಗುವುದಿಲ್ಲ ಎಂದು ಎಸ್ಕಾಂ ಪ್ರಕಟಣೆ ತಿಳಿಸಿದೆ.
ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸೇವಾ ಸಂಪರ್ಕಗಳು, ಹೆಸರು ಬದಲಾವಣೆ ಮತ್ತು ದರ ಬದಲಾವಣೆಯಂತಹ ಸೇವೆಗಳು ಈ ಅವಧಿಯಲ್ಲಿ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ಆದರೆ, ಈ ಸಮಯದಲ್ಲಿ ವಿದ್ಯುತ್ ಸರಬರಾಜಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಎಸ್ಕಾಂ ಅಧಿಕಾರಿಗಳು ಖಚಿತಪಡಿಸಿದ್ದಾರೆ.

"ಆನ್‌ಲೈನ್ ಸೇವೆಗಳು ಲಭ್ಯವಾಗದ ಸಮಯದಲ್ಲಿ, ಗ್ರಾಹಕರಿಗೆ ವಿದ್ಯುತ್ ಬಿಲ್‌ಗಳನ್ನು ನೀಡಲಾಗುತ್ತದೆ. ಆದರೆ ಮಾರ್ಚ್ 20 ರ ನಂತರ ಮಾತ್ರ ಸಿಸ್ಟಮ್‌ನಲ್ಲಿ ನವೀಕರಿಸಲಾಗುತ್ತದೆ. ಈ ಅವಧಿಯಲ್ಲಿ, ಅಪ್ಲಿಕೇಶನ್‌ಗಳ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆಗಳಿರಬಹುದು, ಇದನ್ನು ಐಟಿ ತಂಡ ಸರಿಪಡಿಸುತ್ತದೆ" ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಸ್ಕಾಂ ಪ್ರಕಟಣೆಯಲ್ಲಿ ಏನಿದೆ?
ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು (RAPDRP) ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ.
ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ, ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ ಎಂದು ಈ ಮೂಲಕ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಗ್ರಾಹಕರಿಗೆ ಬಿಲ್‌ಗಳನ್ನು ನೀಡಲಿದ್ದಾರೆ, ಆದರೆ ಈ ಬಿಲ್‌ಗಳನ್ನು ಮಾರ್ಚ್ 20 ರ ನಂತರವೇ ಅಪಲೋಡ್ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಯಾವ ನಗರಗಳಲ್ಲಿ ಆನ್‌ಲೈನ್ ಸೇವೆ ಇರುವುದಿಲ್ಲ: ಪಟ್ಟಿ
ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.
ಸೆಸ್ಕ್: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.
ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ.
-
Bengaluru Gas: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಟೌವ್ಗಳಿಗೆ ಭಾರೀ ಡಿಮ್ಯಾಂಡ್, ಕಾರಣವೇನು -
Induction Stove: ಎಲ್ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಸುತ್ತಿದ್ದೀರಾ? ಈ ವಿಧದ ಪಾತ್ರೆಗಳು ನಿಮ್ಮ ಅಡುಗೆಮನೆಯಲ್ಲಿರಲಿ -
ಬೆಂಗಳೂರಿಗೆ ಗ್ಯಾಸ್ ಬೆನ್ನಲ್ಲೇ ಕರೆಂಟ್ ಶಾಕ್! ಯಲಹಂಕ ಅನಿಲ ವಿದ್ಯುತ್ ಸ್ಥಾವರ ಬಂದ್; ಕತ್ತಲಿನತ್ತ ಸಿಲಿಕಾನ್ ಸಿಟಿ.. -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications