ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ಪತ್ರೆಯಲ್ಲೇ ನಮಗೆ ಕ್ವಾರಂಟೈನ್ ಮಾಡಿ: ಇಎಸ್‌ಐ ವೈದ್ಯರು, ನರ್ಸ್‌ಗಳ ಅಳಲು

|
Google Oneindia Kannada News

ಬೆಂಗಳೂರು, ಏಪ್ರಿಲ್ 11: ಬೆಂಗಳೂರಿನಲ್ಲೂ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ದಿನವಿಡೀ ಕೊವಿಡ್ 19 ಶಂಕಿತ ರೋಗಿಗಳಿಗೆ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿರುವ ಇಎಸ್‌ಐ(ಎಂಪ್ಲಾಯೀಸ್ ಸ್ಟೇಟ್ ಇನ್ಶುರೆನ್ಸ್ ಕಾರ್ಪೊರೇಷನ್) ಆಸ್ಪತ್ರೆ ನರ್ಸ್‌ಗಳು ನಮಗೂ ಆಸ್ಪತ್ರೆಯಲ್ಲೇ ಕ್ವಾರಂಟೈನ್‌ನಲ್ಲಿರಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಳಗ್ಗೆ 10-12 ಗಂಟೆಯವರೆಗೆ ಶಂಕಿತ ಕೊರೊನಾ ಪ್ರಕರಣಗಳು ಬಂದಿದ್ದು,ಅದರಲ್ಲಿ ಎರಡು ದೃಢಪಟ್ಟಿವೆ.ಬೆಂಗಳೂರಿನ ರಾಜಾಜಿನಗರದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಈಗಾಗಲೇ ನೂರಾರು ಮಂದಿಯನ್ನು ಐಸೊಲೇಷನ್‌ನಲ್ಲಿರಿಸಲಾಗಿದ್ದು. ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅವರನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ESI Doctors Urges Please Quarantine Us In Hospital

ಆದರೆ ವೈದ್ಯರು, ಮತ್ತು ನರ್ಸ್‌ಗಳು ಕೊರೊನಾ ವೈರಸ್‌ ಸೋಂಕಿತರಿಗೆ ಚಿಕಿತ್ಸೆ ನೀಡಿ ಬಳಿಕ ಮನೆಗಳಿಗೆ ತೆರಳುತ್ತಿದ್ದಾರೆ. ಇದರಿಂದ ತಮ್ಮ ಕುಟುಂಬದವರಿಗೂ ಸೋಂಕು ತಗುಲುವ ಸಾಧ್ಯತೆ ಇದ್ದು ನಾವು ಆಸ್ಪತ್ರೆಯಲ್ಲಿಯೇ ಉಳಿದುಕೊಳ್ಳುತ್ತೇವೆ ಎಂದು ಇಎಸ್‌ಐ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ESI Doctors Urges Please Quarantine Us In Hospital

ಆದರೆ ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ಹೇಳಿದ್ದು, ವೈದ್ಯರು ಹಾಗೂ ನರ್ಸ್‌ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತಿಮವಾಗಿ ಆಡಳಿತ ಮಂಡಳಿ ಸಭೆ ನಡೆಸುತ್ತಿದ್ದು, ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

English summary
Bengaluru Rajajinagar ESI Hospital Doctors and Nurse who are treating COVID 19 patients Urging that Please Quarantine Them in Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X