"170 ಎಕರೆಯಲ್ಲಿ ಬೆಂಗಳೂರು ಉತ್ತರ ವಿವಿ ಸ್ಥಾಪನೆ''
ಬೆಂಗಳೂರು, ಫೆಬ್ರವರಿ 15: ಬೆಂಗಳೂರು ಉತ್ತರ ವಿವಿಗೆ 170 ಎಕರೆ ಜಾಗವನ್ನು ನಿಗದಿ ಮಾಡಲಾಗಿದೆ. ಆದರೆ ಜಾಗದ ಸಂಬಂಧ ಕೆಲವು ಸಮಸ್ಯೆಗಳಿದ್ದು, ಅದರ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ ತಿಳಿಸಿದರು.
ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 53 ಎಕರೆಯಲ್ಲಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಇನ್ನೊಂದು ತಿಂಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ಒಟ್ಟು 170 ಎಕರೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಜಂಗಮಕೋಟೆಯಲ್ಲಿ ಸ್ಥಾಪನೆ ಮಾಡುತ್ತೇವೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಸದ್ಯ ಒಂದೂವರೆ ಕೋಟಿ ಜನ ಬೆಂಗಳೂರು ನಗರದಲ್ಲಿದ್ದಾರೆ. ಬೆಂಗಳೂರಿನಲ್ಲಿರುವ ಕಾಲೇಜುಗಳು ಸಾಲುತ್ತಿಲ್ಲ. ಪದವಿ ಕಾಲೇಜುಗಳು ಕಡಿಮೆ ಇವೆ. ಹೀಗಾಗಿ, ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿ ಕಾಲೇಜು ಆರಂಭ ಮಾಡುತ್ತೇವೆ ಎಂದರು.
ಬೆಂಗಳೂರಿನಲ್ಲಿರುವ ಜಮೀನುಗಳನ್ನು ಪಡೆದುಕೊಂಡು ಕಾಲೇಜು ಸ್ಥಾಪನೆ ಮಾಡುತ್ತೇವೆ. ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಕಾಲೇಜು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ವಿಶ್ವವಿದ್ಯಾಲಯಗಳ ಅಡಿ ಕಾಲೇಜುಗಳು ಪ್ರಾರಂಭ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿರುವ ಕ್ಷೇತ್ರಗಳಲ್ಲಿ ಮೂರು, ಐದು ಎಕರೆ ಜಾಗಗಳ ಮಾಹಿತಿ ಪಡೆಯುತ್ತೇವೆ. ರಾತ್ರೋರಾತ್ರಿ ಕಾಲೇಜು ಪ್ರಾರಂಭ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಆರಂಭ ಮಾಡುತ್ತೇವೆ ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭರವಸೆ ನೀಡಿದರು.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications