ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್‌ ಇಲ್ಲ

|
Google Oneindia Kannada News

ಬೆಂಗಳೂರು, ಜುಲೈ 31; ವಿಶ್ವದ ವಿವಿಧ ದೇಶಗಳಲ್ಲಿ ತಲ್ಲಣ ಮೂಡಿಸಿರುವ ಮಂಕಿಪಾಕ್ಸ್ ಬೆಂಗಳೂರಿಗೆ ಬಂತು ಎಂದು ಶನಿವಾರ ಆತಂಕ ಸೃಷ್ಟಿಯಾಗಿತ್ತು. ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಭಾನುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟೀವ್ ಎಂದು ಧೃಢಪಟ್ಟಿದ್ದು, ಚಿಕನ್ ಪಾಕ್ಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇದೇನಪ್ಪಾ ಹೊಸ ರೋಗ?: ಕೋತಿಗಳ ಕಚ್ಚುವಿಕೆಯಿಂದ 'ಮಂಕಿ ಬಿ ವೈರಸ್'! ಇದೇನಪ್ಪಾ ಹೊಸ ರೋಗ?: ಕೋತಿಗಳ ಕಚ್ಚುವಿಕೆಯಿಂದ 'ಮಂಕಿ ಬಿ ವೈರಸ್'!

Ethiopiaa Man Come To Bengaluru Tested Negative For Monkeypox

ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡುಬಂದಿರು ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ ಎಂದು ಸಚಿವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಚಿಂತೆ ಬಿಡಿ: ಭಾರತದ ಮೊದಲ ಮಂಕಿಪಾಕ್ಸ್ ರೋಗಿ ಗುಣಮುಖಚಿಂತೆ ಬಿಡಿ: ಭಾರತದ ಮೊದಲ ಮಂಕಿಪಾಕ್ಸ್ ರೋಗಿ ಗುಣಮುಖ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಕಿಪಾಕ್ಸ್ ಕಾಯಿಲೆಯ ಸಾಮಾನ್ಯ ಲಕ್ಷಣಗಳನ್ನು ಈಗಾಗಲೇ ಪ್ರಕಟಿಸಿದೆ. ಸೋಂಕು ಪೀಡಿತ ವ್ಯಕ್ತಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬ ಮಾರ್ಗಸೂಚಿಯನ್ನು ಹೊರಡಿಸಿದೆ.

ಭಾರತದಲ್ಲಿ ಇದುವರೆಗೂ ಕೇರಳ ಮತ್ತು ನವದೆಹಲಿಯಲ್ಲಿ ಮಾತ್ರ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದೆ. ಆದರೆ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ಕಣ್ಗಾವಲು ಇಡಲಾಗಿದೆ.

ಒಂದು ವೇಳೆ ಯಾವುದೇ ವ್ಯಕ್ತಿ ಮಂಕಿಪಾಕ್ಸ್‌ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದರೆ ಆತ 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕು. 21 ದಿನಗಳಲ್ಲಿ ಆ ವ್ಯಕ್ತಿಯಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಾರದಿದ್ದಲ್ಲಿ ಯಾವುದೇ ಅಪಾಯವಿಲ್ಲ ಎಂದು ಪರಿಗಣಿಸಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

English summary
Dr. K. Sudhakar Karnataka minister of health & family welfare twitted that Man who come to Bengaluru suspected of the monkeypox virus has tested negative.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X