ಬೆಂಗಳೂರಿನ ಕಟ್ಟಡ ಮಾಲೀಕರೇ ಗಮನಿಸಿ, ಇನ್ಮುಂದೆ ಈ ವ್ಯವಸ್ಥೆ ಕಡ್ಡಾಯ!
ಬೆಂಗಳೂರು, ಫೆ. 22: ಮುಗಿದು ಹೋಗುವ ಸಂಪನ್ಮೂಲಗಳ ಬಳಕೆ ಆದಷ್ಟು ಕಡಿಮೆ ಮಾಡಲು ತೀರ್ಮಾನ ಮಾಡಿರುವ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಮಾಡಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
Recommended Video
ಬೆಂಗಳೂರಿನಲ್ಲಿ ಸೋಮವಾರ ಬೆಳಿಗ್ಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಏರ್ಪಡಿಸಲಾಗಿದ್ದ 'ಭವಿಷ್ಯದತ್ತ ಸುಸ್ಥಿರ ಸಾರಿಗೆ' ವರ್ಚುಯಲ್ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದರು.
ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಸಬ್ಸಿಡಿ ನೀಡಲಾಗಿದೆ
ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಎಲೆಕ್ಟ್ರಿಕ್ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ಡಿಸಿಎಂ ಹೇಳಿದರು.

ಜಾಗತಿಕ ತಾಪಮಾನ ನಿಯಂತ್ರಣ
ಎಲೆಕ್ಟ್ರಿಕ್ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ ಎಂದ ಅವರು, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಹಲವರು ಭಾಗಿ
ಗೋಷ್ಠಿಯಲ್ಲಿ ಸಿಡಿಪಿಕ್ಯೂ ಗ್ಲೋಬಲ್ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷೆ ಅನಿತಾ ಜಾರ್ಜ್, ಉದ್ಯಮಿ ವಿಘ್ನೇಶ್ ನಂದಕುಮಾರ್ ಹಾಗೂ ಬಿನಾಯ್ ಟೆಕ್ನಾಲಜೀಸ್ ಸಂಸ್ಥೆಯ ಸಹ ಸಂಸ್ಥಾಪಕ ವಿಭು ಬಿನಾಯ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್












Click it and Unblock the Notifications