ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜುಲೈ 29: ಮಾಜಿ ಸಿಎಂ ಸಿದ್ದರಾಮಯ್ಯನವರ ಟೀಕೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಅವರ ದಾಟಿಯಲ್ಲೆ ಉತ್ತರ ನೀಡಿದರು.
ಪ್ರವೀಣ್ ಹತ್ಯೆ ಖಂಡಿಸಿ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯನವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿ ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು.
ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ ಪ್ರಕರಣದಿಂದ ಮುಕ್ತಗೊಳಿಸಲಾಗಿತ್ತು. ಅವರು ಈಗ ಪುನ: ಸಮಾಜಘಾತುಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕೇವಲ ಹೇಳಿಕೆಗಳನ್ನು ನೀಡುತ್ತಾರೆ ಎಂದರು. ಸರ್ಕಾರ ಕ್ಷಿಪ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಜನರ ಮುಂದಿವೆ.

ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರವೀಣ್ ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಧ್ವನಿ ಎತ್ತಿದ್ದವು. ಅದರಲ್ಲೂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗನ್ನು ಮಾಡುತ್ತಲೇ ಇದ್ದಾರೆ. ಸರ್ಕಾರದಲ್ಲಿ ಫಡಿಂಗ್ ವ್ಯವಹಾರ ನಡೆಯುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಯಿ ಅವರು ಹೇಳಿಕೆ ನೀಡಿದವರ ವಿರುದ್ಧ ಆಕ್ರೋಶ ಹೊರಹಾಕುತ್ತಾ ಉತ್ತರ ಕೊಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ವಿಪಕ್ಷ ನಾಯಕರಿಗೆ ಪ್ರಶ್ನಿಸುತ್ತಾ ತಿರುಗೇಟು ನೀಡಿದ್ದಾರೆ.












Click it and Unblock the Notifications