ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸರ್ಕಾರದಿಂದ ರೈತರ ಬೆನ್ನಿಗೆ ಚೂರಿ; ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 11: ರೈತಪರ ಸರ್ಕಾರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮೂಲಕ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸರ್ಕಾರ ಮತ್ತು ರಸಗೊಬ್ಬರ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇಕಡ 60ರಷ್ಟು ಹೆಚ್ಚಳ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹಳೆಯ ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚಿಸಿದ ಸರ್ಕಾರಹಳೆಯ ದರದಲ್ಲಿಯೇ ರಸಗೊಬ್ಬರ ಮಾರಾಟಕ್ಕೆ ಸೂಚಿಸಿದ ಸರ್ಕಾರ

ಕೇಂದ್ರದ ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಸದಾನಂದ ಗೌಡರು ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 Ex-Chief Minister HD Kumaraswamy Suggestion To Govt About Fertilizer Price Hike

ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ:

Recommended Video

ಮಹಿಳೆಯರ ಐಡಿಯಾ ನೋಡಿದ್ರೆ ಟ್ರಾಫಿಕ್ ಪೊಲೀಸ್ ತಲೆ ತಿರುಗಿ ಬೀಳೋದು ಪಕ್ಕಾ | Oneindia Kannada

"ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ" ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

English summary
Ex-Chief Minister HD Kumaraswamy Suggestion To Govt About Fertilizer Price Hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X