ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈಗೆ ಕೈಕೊಟ್ಟು ಬಿಜೆಪಿಗೆ ಜೈ ಎಂದ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

|
Google Oneindia Kannada News

ಬೆಂಗಳೂರು, ಮಾರ್ಚ್. 08 : ಮಾಜಿ ಸಂಸದ ಕರಾವಳಿಯ ಪ್ರಭಾವಿ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮತ್ತು ಹೊಸಪೇಟೆಯ ಮಾಜಿ ಶಾಸಕ ರತನ್ ಸಿ೦ಗ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸೇರಿದರು.

ಬುಧವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಎಸ್ ವೈ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡು.ಇದೇ ವೇಳೆ ಮೂಡಬಿದರೆಯ ಕಾಂಗ್ರೆಸ್ ನಾಯಕ ಮೇಘನಾಥ್ ಶೆಟ್ಟಿ ಬಿಜೆಪಿಗೆ ಸೇರ್ಪಡೆಗೊಂಡರು. [ಮಣಿದ ಬಿಎಸ್ ವೈ, ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರ ಬದಲಾವಣೆ]

ಈ ಸಂದರ್ಭದಲ್ಲಿ ಕಾರ್ಕಳ ಸುನಿಲ್ ಕುಮಾರ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್. ಅಶೋಕ್, ವಿ ಸೋಮಣ್ಣ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು.

Ex MP Jayaprakash Hegde and ex mla rathan singh joins bjp

ಬ್ರಹ್ಮಾವರ ಕ್ಷೇತ್ರ ದಿಂದ ಶಾಸಕರಾದ ಜಯಪ್ರಕಾಶ್ ಹೆಗ್ಡೆ ನಂತರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನತಾ ಪರಿವಾರದ ಒಡಕಿನ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿದ್ದರು.

ಕ್ಷೇತ್ರ ಮರುವಿಂಗಡಣೆಯ ಬಳಿಕ ಬ್ರಹ್ಮಾವರ ಕ್ಷೇತ್ರ ವಿಲೀನಗೊಂಡಾಗ ಕಾಂಗ್ರೆಸ್ ಸೇರ್ಪಡೆಯಾದ ಹೆಗ್ಡೆ ಅವರ ಹುಟ್ಟೂರಾದ ಕುಂದಾಪುರ ಕ್ಷೇತ್ರದಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸ್ಪರ್ಧಿಸಿ ಸೋಲು ಕಂಡರು.

ಸಂಸದರಾಗಿದ್ದ ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿಯಾದ ಬಳಿಕ ನಡೆದ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ಅವರ ವಿರುದ್ಧ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದ್ದರು.

ಬಳಿಕ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲು ಅನುಭವಿಸಿದ್ದರು. ಪರಿಷತ್ ಚುನಾವಣೆಯ ವೇಳೆ ಕಾಂಗ್ರೆಸ್ ಪ್ರಭಾವಿ ಮುಖಂಡ ಪ್ರತಾಪ್ ಚಂದ್ರ ಶೆಟ್ಟರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷದಿಂದಲೇ ಅಮಾನತುಗೊಂಡಿದ್ದರು.

English summary
Ex MP Jayaprakash hegde and Hospet ex mla Rathan Singh joins BJP in Malleshwaram BJP office Bengaluru On March 08.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X