Exit Poll Result 2024: ಬೆಂಗಳೂರು ನಗರ ಪೂರ್ತಿ ಬಿಜೆಪಿ ವಶಕ್ಕೆ?
ಬೆಂಗಳೂರು, ಜೂನ್ 02: ಲೋಕಸಭೆ ಚುನಾವಣೆ 2024ರಲ್ಲಿ ಬೆಂಗಳೂರು ನಗರದ ಮೂರು ಕ್ಷೇತ್ರಗಳ ಫಲಿತಾಂಶ ಏನಾಗಲಿದೆ?. ಜೂನ್ 4ರ ಮಂಗಳವಾರ ಮತ ಎಣಿಕೆ ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಗಳು ಬೆಂಗಳೂರು ನಗರ ಬಿಜೆಪಿ ವಶವಾಗಲಿದೆ ಎಂದು ಅಂದಾಜಿಸಿವೆ.
ಬೆಂಗಳೂರು ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿವೆ. 2019ರಲ್ಲಿಯೂ ಮೂರು ಕ್ಷೇತ್ರಗಳು ಬಿಜೆಪಿ ಪಾಲಾಗಿತ್ತು. ಈ ಬಾರಿ ಏಪ್ರಿಲ್ 26ರಂದು ಬೆಂಗಳೂರು ಸೆಂಟ್ರಲ್‌ನಲ್ಲಿ ಶೇ 54.06, ಬೆಂಗಳೂರು ಉತ್ತರದಲ್ಲಿ ಶೇ 54.45 ಮತ್ತು ಬೆಂಗಳೂರು ದಕ್ಷಿಣದಲ್ಲಿ ಶೇ 53.17ರಷ್ಟು ಮತದಾನವಾಗಿತ್ತು.

2024ರ ಅಭ್ಯರ್ಥಿಗಳನ್ನು ನೋಡುವುದಾದರೆ ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ (ಬಿಜೆಪಿ), ಸೌಮ್ಯಾ ರೆಡ್ಡಿ (ಕಾಂಗ್ರೆಸ್). ಬೆಂಗಳೂರು ಕೇಂದ್ರದಲ್ಲಿ ಪಿ. ಸಿ. ಮೋಹನ್ (ಬಿಜೆಪಿ), ಮನ್ಸೂಲ್ ಅಲಿ ಖಾನ್ (ಕಾಂಗ್ರೆಸ್). ಬೆಂಗಳೂರು ಉತ್ತರದಲ್ಲಿ ಎಂ. ವಿ. ರಾಜೀವ್ ಗೌಡ (ಕಾಂಗ್ರೆಸ್), ಶೋಭಾ ಕರಂದ್ಲಾಜೆ (ಬಿಜೆಪಿ) ಅಭ್ಯರ್ಥಿಗಳು.
ಬೆಂಗಳೂರು ಬಿಜೆಪಿಗೆ: ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತವಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪ ಮುಖ್ಯಮಂತ್ರಿಯಾದ ಡಿ. ಕೆ. ಶಿವಕುಮಾರ್. ನಗರದಲ್ಲಿ ಮೂರು ಕ್ಷೇತ್ರಗಳ ಪೈಕಿ ಕನಿಷ್ಠ 2 ಗೆಲ್ಲಬೇಕು ಎಂಬ ಗುರಿಯೊಂದಿಗೆ ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ಕೈಗೊಂಡಿತ್ತು.
India Today-Axis My India ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ರಾಜ್ಯದ 28 ಸೀಟುಗಳ ಪೈಕಿ ಬಿಜೆಪಿ 20-22, ಜೆಡಿಎಸ್ 3, ಕಾಂಗ್ರೆಸ್ 3-5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅಲ್ಲದೇ ಬಿಜೆಪಿ-ಜೆಡಿಎಸ್ ಮೈತ್ರಿ ಒಕ್ಕಲಿಗ, ಲಿಂಗಾಯತ ಮತಗಳನ್ನು ಬಿಜೆಪಿಗೆ ತಂದು ಕೊಡಲಿದ್ದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಶಕ್ತಿ ಹೆಚ್ಚಲಿದೆ ಎಂದು ಅಂದಾಜಿಸಲಾಗಿದೆ.
ಬಿಜೆಪಿ ಬೆಂಗಳೂರಿನ 3, ಮಲೆನಾಡು, ಕರಾವಳಿ ಭಾಗದಲ್ಲಿ ಜಯಭೇರಿ ಬಾರಿಸಲಿದೆ. ಮುಂಬೈ ಕರ್ನಾಟಕ ಭಾಗದಲ್ಲಿಯೂ ಪಕ್ಷ ಹೆಚ್ಚಿನ ಸ್ಥಾನಗಳನ್ನುಗಳಿಸಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ. ಸಿ. ಎನ್. ಮಂಜುನಾಥ್, ಕಾಂಗ್ರೆಸ್‌ನಿಂದ ಡಿ. ಕೆ. ಸುರೇಶ್ ಎದುರಾಳಿಗಳು. ಈ ಕ್ಷೇತ್ರ ಯಾರ ವಶವಾಗಲಿದೆ? ಎಂಬುದು ಕುತೂಹಲವಾಗಿದೆ.
2019ರಲ್ಲಿ ಬಿಜೆಪಿ ಬೆಂಗಳೂರು ನಗರದ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಪಾಲಾಗಿತ್ತು. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆದ್ದ ಏಕೈಕ ಕ್ಷೇತ್ರ ಬೆಂಗಳೂರು ಗ್ರಾಮಾಂತರವಾಗಿತ್ತು.
ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದು. ಬೆಂಗಳೂರು ನಗರದಲ್ಲಿ ಡಿ. ಕೆ. ಶಿವಕುಮಾರ್ ಪ್ರಭಾವ ಇರುವ ಕಾರಣ ಕಾಂಗ್ರೆಸ್ ಕನಿಷ್ಠ ಎರಡು ಸೀಟು ಗೆಲ್ಲಬಹುದು ಎಂದು ಅಂದಾಜಿಸಲಾಗಿತ್ತು. ಜೂನ್ 4ರಂದು ಘೋಷಣೆಯಾಗುವ ಫಲಿತಾಂಶದ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.
ಚುನಾವಣೋತ್ತರ ಸಮೀಕ್ಷೆಯ ಪ್ರಕಾರ 'ಇಂಡಿಯಾ' ಮೈತ್ರಿಕೂಟಕ್ಕೆ ಎಸ್‌ಸಿಯ 55, ಎಸ್‌ಟಿ 36, ಲಿಂಗಾಯತ 15, ಒಕ್ಕಲಿಗ 24, ಕುರುಬರ ಶೇ 50ರಷ್ಟು ಮತಗಳು ಬರಲಿವೆ. ಒಕ್ಕಲಿಗ+ಲಿಂಗಾಯತ ಮತಗಳು ಹೆಚ್ಚಿನದಾಗಿ ಎನ್‌ಡಿಎ ಪಾಲಾಗಲಿದ್ದು, ಬಿಜೆಪಿ-ಜೆಡಿಎಸ್‌ಗೆ ಸಹಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷ ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2 ರಿಂದ 3 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ಅಂದಾಜಿಸಲಾಗಿದ್ದು, ಮೈತ್ರಿಯಿಂದ ಜೆಡಿಎಸ್‌ಗೆ ಅನುಕೂಲವೇ ಆಗಲಿದೆ.
2019ರಲ್ಲಿ ಜೆಡಿಎಸ್ ಹಾಸನ ಒಂದು ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿತ್ತು. ಚುನಾವಣೆಯನ್ನು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಎದುರಿಸಿತ್ತು. ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎದುರಿಸಿದ್ದು, ಹೆಚ್ಚಿನ ಸೀಟು ಸಿಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್











Click it and Unblock the Notifications