ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊವಿಡ್ ನಿಯಂತ್ರಿಸಲು '5-T' ತಂತ್ರ ಬಳಸುವುದು ಮುಖ್ಯ- ಸಿಎಂ

|
Google Oneindia Kannada News

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು 5-T ತಂತ್ರ ಬಳಸುವುದು ಬಹಳ ಮುಖ್ಯ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Recommended Video

Drone Prathap ಜೀವನಾಧಾರಿತ ಸಿನಿಮಾ ಎಲ್ಲಿಗೆ ಬಂತು ? | Oneindia Kannada

ಜುಲೈ 22ರಿಂದ ಲಾಕ್‌ಡೌನ್ ತೆರವುಗೊಳ್ಳುತ್ತಿರುವ ಹಿನ್ನೆಲೆ ಇಂದು ಸಂಜೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ 'ಕೊವಿಡ್ ತಡೆಯಲು 5-T ತಂತ್ರವನ್ನು ಸೂಕ್ತವಾಗಿ ಬಳಸಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗಿದೆ' ಎಂದರು.

Experts suggested 5T strategy to CM Yediyurappa For control covid 19

ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲ

ಏನಿದು 5-T ತಂತ್ರ?

1. Trace

2. Track

3. Test

4. Treat

5. Technology

'ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ನಾವು ಟ್ರೇಸ್, ಟ್ರ್ಯಾಕ್, ಟ್ರೀಟ್, ಟೆಸ್ಟ್, ಟೆಕ್ನಾಲಜಿ ಈ 5-T ಸೂತ್ರದಲ್ಲಿ ನಮ್ಮ ಸರ್ಕಾರ ಮತ್ತಷ್ಟು ದಕ್ಷತೆಯಿಂದ ಕಾರ್ಯ ನಿರ್ವಹಿಸಲಿದೆ' ಮುಖ್ಯಮಂತ್ರಿ ಯಡಿಯೂರಪ್ಪ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಂಕಿತರನ್ನು ಗುರುತಿಸುವುದು, ಸೋಂಕಿತರ ಸಂಪರ್ಕಿತರನ್ನು ಹುಡುಕುವುದು, ಕೊವಿಡ್ ಪರೀಕ್ಷೆಗಳನ್ನು ಮಾಡುವುದು, ಸೂಕ್ತ ಚಿಕಿತ್ಸೆ ನೀಡುವುದು. ಅಗತ್ಯ ತಂತ್ರಜ್ಞಾನವನ್ನು ಬಳಸುವುದರಿಂದ ಕೊವಿಡ್ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರವೂ ಹಲವು ಸೂಖ್ತ ಕ್ರಮಗಳನ್ನು ಕೈಗೊಂಡಿದೆ. ಪ್ರತೊಯೊಬ್ಬ ಸೋಂಕಿನಿಂದಲೂ ಸುಮಾರು 47 ಜನ ಸಂಪರ್ಕಿತರನ್ನು ಪರೀಕ್ಷಿಸುವ ವಿಧಾನವನ್ನು ಅನುಸರಿಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ವಿರೋಧ ಪಕ್ಷದವರು ಟೀಕೆ ಟಿಪ್ಪಣಿ ಬಿಟ್ಟು ಸೂಕ್ತ ಸಲಹೆ ನೀಡಿ: ಯಡಿಯೂರಪ್ಪವಿರೋಧ ಪಕ್ಷದವರು ಟೀಕೆ ಟಿಪ್ಪಣಿ ಬಿಟ್ಟು ಸೂಕ್ತ ಸಲಹೆ ನೀಡಿ: ಯಡಿಯೂರಪ್ಪ

ಇಷ್ಟು ದಿನ ಕೊರೊನಾ ಪರೀಕ್ಷೆಗೆ ಒಳಪಡಿಸಿದರೆ ಫಲಿತಾಂಶ ಬರುವುದಕ್ಕು ಮೂರು ಅಥವಾ ನಾಲ್ಕು ದಿನ ಬೇಕಾಗಿತ್ತು. ಆದರೆ, ಈಗ 24 ಗಂಟೆಗಳಲ್ಲಿ ಫಲಿತಾಂಶ ನೀಡುವಂತಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

English summary
Experts have suggested a 5T strategy to control covid19. Trace, Track, Test, Treat and Technology says Karnataka CM BS Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X