ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಬಗ್ಗೆ ಮಹತ್ವದ ಸುದ್ದಿ!
ಬೆಂಗಳೂರು: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯ ಅನ್ವಯ ವಿಧಾನ ಪರಿಷತ್ತಿನ ಚುನಾವಣೆ 2023ರ ಸಂಬಂಧ ಮಹತ್ವದ ಆದೇಶ ಪ್ರಕಟವಾಗಿದೆ. ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ & ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಮತದಾರರ ಪಟ್ಟಿ ಕರಡು ಪ್ರತಿ ಇಂದು ಪ್ರಕಟವಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿ ಯಾವುದೇ ಹಕ್ಕು ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತವಾಗಿ ಡಿಸೆಂಬರ್ 09 ರ ಒಳಗೆ ಸಲ್ಲಿಸಬಹುದು ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ತಿಳಿಸಿದ್ದಾರೆ. ಇಂದು ಬಿಬಿಎಂಪಿ ಕೇಂದ್ರ ಕಚೇರಿಯ, ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ಮತದಾನದ ನೋಂದಣಾ ಅಧಿಕಾರಿಗಳ ಬಳಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಡಿಸೆಂಬರ್ 25ಕ್ಕೆ ಆಕ್ಷೇಪಣೆ ಪರಿಶೀಲಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಮತದಾರರ ಪಟ್ಟಿಗೆ ಅರ್ಜಿ ಕರೆಯಲಾಗಿತ್ತು
ಮತ್ತೊಂದೆಡೆ ಸಾಕಷ್ಟು ಪದವಿಧರರು ಹಾಗೂ ಶಿಕ್ಷಕರನ್ನು ಸೇರ್ಪಡೆ ಮಾಡಿಕೊಳ್ಳಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು. ಡಿಸೆಂಬರ್ 30 ರಂದು 'ಅಂತಿಮ ಮತದಾರರ ಪಟ್ಟಿ' ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು. ಚುನಾವಣಾ ಆಯೋಗದ ವೇಳಾಪಟ್ಟಿಯ ಅನ್ವಯ, ವಿಧಾನ ಪರಿಷತ್ತಿನ ಚುನಾವಣೆ-2023ರ ಸಂಬಂಧ ಮತದಾರರ ಪಟ್ಟಿಗಳ, ಸಮಗ್ರ ಪರಿಷ್ಕರಣೆ ಬಗ್ಗೆ 2023 ರ ಸೆಪ್ಟೆಂಬರ್ 30ಕ್ಕೆ ಸಾರ್ವಜನಿಕವಾಗಿ ಪ್ರಕಟಣೆ ಹೊರಡಿಸಲಾಗಿತ್ತು. ನಮೂನೆ 19 ಹಾಗೂ ನಮೂನೆ 18ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅಕ್ಟೋಬರ್ 01 ರಿಂದ ನವೆಂಬರ್ 06 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದು ಅವರು ತಿಳಿಸಿದರು.
ಒಟ್ಟಾರೆ ಎಷ್ಟು ಮತದಾರರು?
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ, ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 39,858 ಮತದಾರರು ನೋಂದಣಿ ಮಾಡಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗಾಗಿ 6,343 ಮತದಾರರು ನೋಂದಣಿ ಮಾಡಿಕೊಂಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್. ಮತದಾರರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲಾಗುತ್ತಿದೆ. ಅದರಂತೆ ಬೆಂಗಳೂರು ಕೇಂದ್ರದಲ್ಲಿ 44,000, ಬೆಂಗಳೂರು ಉತ್ತರದಲ್ಲಿ 52,000, ಬೆಂಗಳೂರು ದಕ್ಷಿಣದಲ್ಲಿ 42,350 & ಬೆಂಗಳೂರು ನಗರದಲ್ಲಿ 97,000 ಮತದಾರರ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಮತದಾರರ ಗುರುತಿನ ಚೀಟಿ ತಲುಪಲಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಗೂ ಸಿದ್ಧತೆ
ಲೋಕಸಭಾ ಚುನಾವಣೆಗೆ ಸಂಬಂಧಿಸಿ ಈಗಾಗಲೇ ಕರಡು ಮತದಾರರ ಪಟ್ಟಿ ಪ್ರಕಟಿವಾಗಿದೆ. ಈ ಸಂಬಂಧ ನಗರದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ನಮೂನೆ-6, 7 ಹಾಗೂ ನಮೂನೆ 8 ನೀಡಿ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ. ಮೃತ ಪಟ್ಟಿರುವವರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಪ್ರಕ್ರಿಯೆ ಕೂಡಾ ನಡೆಯುತ್ತಿದ್ದು ಜನವರಿ 5ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಆರ್. ರಾಮಚಂದ್ರನ್ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ 18 ವರ್ಷ ತುಂಬಿದ ಯುವ ಮತದಾರರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಮತದಾರರ ಪಟ್ಟಿಯಲ್ಲಿ ನೋಂದಣಿ ಆಗಬೇಕು. ಹಾಗೇ ಇದರ ಜೊತೆಗೆ, ಇತರರನ್ನೂ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಪ್ರೇರಣೆ ನೀಡಬೇಕು ಎಂದು ಮನವಿ ಮಾಡಿದರು ಆರ್. ರಾಮಚಂದ್ರನ್. ಇನ್ನು ಈ ವೇಳೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ, ಬೆಂಗಳೂರು ಕೇಂದ್ರ/ ದಕ್ಷಿಣ/ಉತ್ತರ/ ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್ ಸೇರಿ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications