Scholarship For Students: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಮಾಹಿತಿ ಇಲ್ಲಿದೆ!

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಜನಜಾತೀಯ ಗೌರವ ದಿವಾಸ್ ಅಂಗವಾಗಿ ಕೇಂದ್ರ ಪುರಸ್ಕೃತ ಯೋಜನೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1 ಕಚೇರಿ, ಸಮಾಜ ಕಲ್ಯಾಣ ಇಲಾಖೆ, 2ನೇ ಮಹಡಿ, ಮಿನಿ ವಿಧಾನಸೌಧ, ಯಲಹಂಕ, ಬೆಂಗಳೂರು ಉತ್ತರ ತಾಲೂಕು ಈ ವಿಳಾಸ ಸಂಪರ್ಕಿಸಬಹುದು ಅಂತಾ ತಿಳಿಸಲಾಗಿದೆ. ದೂರವಾಣಿ ಸಂಖ್ಯೆ 080-28461351, 080-28461356 ಅನ್ನ ಸಂಪರ್ಕಿಸಲು ಬೆಂಗಳೂರು ಉತ್ತರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Explore How To Apply For Scholarship In Karnataka

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ಹಾಗೇ ಮತ್ತೊಂದು ಕಡೆ ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023 ಹಾಗೂ 2024ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಇದೀಗ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ದಕ್ಷಿಣ ತಾಲೂಕು, ಬೆಂಗಳೂರು ನಗರ ಜಿಲ್ಲೆ ಈ ವಿಳಾಸ ಸಂಪರ್ಕಿಸಿ ಇದೀಗ ತಿಳಿಸಲಾಗಿದೆ. ಹಾಗೂ ದೂರವಾಣಿ ಸಂಖ್ಯೆಯನ್ನೂ ನೀಡಲಾಗಿದೆ.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಕಚೇರಿ ಸಂಪರ್ಕ ಮಾಡಬಹುದು ಇಲ್ಲ ದೂರವಾಣಿ ಸಂಖ್ಯೆ: 080-26711096 ಅನ್ನ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+