ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪ್ರಕಟ: ಸಂಪೂರ್ಣ ಮಾಹಿತಿ ಇಲ್ಲಿದೆ!
ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಈ ಬಗ್ಗೆ ಸಂಪೂರ್ಣ ಮಾಹಿತಿಗೆ ಮುಂದೆ ಓದಿ.
ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

ತಹಸೀಲ್ದಾರ್ ಕಚೇರಿಯಲ್ಲೂ ಮಾಹಿತಿ ಲಭ್ಯ
ಇದರ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಚೇರಿಯ ಸಮಯದಲ್ಲಿ ಪರಿಶೀಲನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ.
ಅರ್ಹತಾ ದಿನಾಂಕ ಯಾವುದು?
ಮತದಾರರ ಪಟ್ಟಿ ತಯಾರಿಕೆಗಾಗಿ ನವೆಂಬರ್ 1 2023 ಅರ್ಹತಾ ದಿನಾಂಕ ಆಗಿರುತ್ತದೆ. ಈ ಅರ್ಹತಾ ದಿನಾಂಕದಂತೆ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಯಾವುದಾದರೂ ಕ್ಲೇಮುಗಳಿದ್ದಲ್ಲಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರು ನಮೂನೆ-19ರಲ್ಲಿ ಅಥವ ಹೆಸರು ಸೇರಿಸಲು ಆಕ್ಷೇಪಣೆ ಇದ್ದಲ್ಲಿ ಅಥವಾ ಯಾವುದೇ ನಮೂದು ವಿವರದ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಅದನ್ನ ನ. 23, 2023 ರಿಂದ ಡಿಸೆಂಬರ್ 9 2023ರ ಒಳಗೆ ಚುನಾವಣಾ ಆಯೋಗವು ನಿಗದಿಪಡಿಸಿದ ನಮೂನೆಯಲ್ಲಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಅಂಥ ಪ್ರತಿ ಕ್ಲೇಮು ಮತ್ತು ಆಕ್ಷೇಪಣೆಗಳನ್ನ ಖುದ್ದಾಗಿ ಪ್ರಾದೇಶಿಕ ಆಯುಕ್ತರ ಕಚೇರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿ & ಜಿಲ್ಲಾಧಿಕಾರಿಗಳು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ & ದಾವಣಗೆರೆ ಜಿಲ್ಲೆ ಕಚೇರಿಗೆ ಅಥವಾ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆ ಕಚೇರಿಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು ತಿಳಿಸಲಾಗಿದೆ.












Click it and Unblock the Notifications