ಕರ್ನಾಟಕದ ಐಟಿ ಶಿಕ್ಷಣ ವ್ಯವಸ್ಥೆಗೆ ‘ಐಐಟಿ’ ಟಚ್: ಇದು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್?

ಭಾರತದ ಐಟಿ ಉದ್ಯಮಕ್ಕೆ ಕರ್ನಾಟಕದ ಕೊಡುಗೆ ಅಪಾರ ಎನ್ನಬಹುದು. ಏಕೆಂದರೆ ಕನ್ನಡ ನಾಡಲ್ಲೇ ಸಾವಿರಾರು ಐಟಿ ಕಂಪನಿ ಹುಟ್ಟಿಕೊಂಡಿವೆ. ಇನ್ನ ಐಟಿ ತವರು ನಮ್ಮ ಬೆಂಗಳೂರು ಆಗಿದೆ. ಹೀಗಿದ್ದಾಗ ಐಟಿ ಕ್ಷೇತ್ರ ಬೆಳೆಸಲು ಯುವಕರ ಪಾತ್ರವೂ ದೊಡ್ಡದು. ಹೀಗಾಗಿಯೇ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಐಟಿ ಶಿಕ್ಷಣ ವ್ಯವಸ್ಥೆಗೆ 'ಐಐಟಿ' ಟಚ್ ಕೊಡಲು ತಮ್ಮ ಬಜೆಟ್‌ನಲ್ಲಿ ಬಂಪರ್ ಘೋಷಣೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಇತಿಹಾಸ ನಿರ್ಮಿಸಿದ್ದು, ಈಗ 15ನೇ ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಲಾಟರಿಯೇ ಸಿಕ್ಕಿದೆ. ಹಾಗಾದರೆ ಈ ಮೂಲಕ ಐಟಿ ವಿದ್ಯಾರ್ಥಿಗಳಿಗೆ ಸಿಕ್ಕಿರುವ ಬಂಪರ್ ಏನು? ಇಂಜಿನಿಯರಿಂಗ್ ಓದುತ್ತಿರುವ ಪ್ರತಿ ವಿದ್ಯಾರ್ಥಿಯ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರ ಎಂತಹ ಯೋಜನೆ ಕೈಗೊಂಡಿದೆ ಗೊತ್ತಾ? ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಿದ 2024-25ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ, ಕೋಟಿ ಕೋಟಿ ಐಟಿ ಶಿಕ್ಷಣಕ್ಕೆ ಮೀಸಲು ಇಟ್ಟಿರುವುದು ಏಕೆ? ಬನ್ನಿ ತಿಳಿಯೋಣ.

Explore What CM Siddaramaiah Gives To Higher Education In Karnataka In Budget 2024

500 ಕೋಟಿ ವೆಚ್ಚದ ಯೋಜನೆ!

ಅಂದಹಾಗೆ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದಲೇ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಜೊತೆಗೆ ಸಿ.ಎಸ್.ಆ‌ರ್. ನಿಧಿ & ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆಯಿಂದ ವಿವಿ ಅಭಿವೃದ್ಧಿಗೆ ಸಂಪನ್ಮೂಲ ಸಂಗ್ರಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಐಐಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಪೇಟೆಂಟ್ ಪಡೆಯಲು 10 ಕೋಟಿ ರೂ.!

ಇನ್ನು ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ಬೇರು-ಚಿಗುರು ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಉನ್ನತ ಶಿಕ್ಷಣ ಸಂಸ್ಥೆಗಳ, ವಿದ್ಯಾರ್ಥಿಗಳು & ಅಧ್ಯಾಪಕರಿಗೆ ತಮ್ಮ ಆವಿಷ್ಕಾರಗಳಿಗೆ ಪೇಟೆಂಟ್ ಪಡೆದುಕೊಳ್ಳಲು ಅಗತ್ಯವಾದ ತಾಂತ್ರಿಕ ಹಾಗೂ ಆರ್ಥಿಕ ನೆರವು ನೀಡಲು 10 ಕೋಟಿ ರೂಪಾಯಿ ನಿಧಿ ಸ್ಥಾಪಿಸಲು ಈಗ ಸಿಎಂ, ಮಹತ್ವದ ಯೋಜನೆ ಪ್ರಕಟಿಸಿದ್ದಾರೆ.

ರಾಜ್ಯಕ್ಕೆ ತಕ್ಕ ಶಿಕ್ಷಣ ನೀತಿ

ಕಳೆದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಕರ್ನಾಟಕ ರಾಜ್ಯ ಅಸ್ಮಿತೆ & ಸಂಸ್ಕೃತಿಗೆ ಅನುಗುಣವಾಗಿ, ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಕರಡು ಸಿದ್ಧಪಡಿಸಲು ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಲಾಗಿದೆ. ಆಯೋಗ ಶೀಘ್ರದಲ್ಲಿ ವರದಿಯನ್ನ ಸಲ್ಲಿಸಲಿದ್ದು, ಅದರಂತೆ ಪರಿಶೀಲಿಸಿ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುತ್ತೆ ಎಂದು ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗೆ ಹೊಸ ಬಲ ನೀಡಲು ರಾಜ್ಯ ಸರ್ಕಾರ ಇದೀಗ ಮಾಸ್ಟರ್ ಪ್ಲ್ಯಾನ್ ಮಾಡಿದೆ.

Explore What CM Siddaramaiah Gives To Higher Education In Karnataka In Budget 2024

ಮಹಿಳಾ ವಿದ್ಯಾರ್ಥಿಗಳಿಗೆ 30 ಕೋಟಿ!

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರ ದಾಖಲಾತಿಯ ಹೆಚ್ಚಿಸುವ ಮೂಲಕ ಮಹಿಳೆಯರನ್ನು ಸಬಲೀಕರಣ ಮಾಡಲು ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿನ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ಗಳ ಉನ್ನತೀಕರಣಕ್ಕಾಗಿ ಒಟ್ಟು 30 ಕೋಟಿ ರೂಪಾಯಿ ಅನುದಾನ ಒದಗಿಸಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದ್ದು. ಹಾಗೇ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯ ಕಾಲೇಜನ್ನು ಅವಶ್ಯವಿರುವ ಜಿಲ್ಲಾ/ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ 54 ಕೋಟಿ ರೂ. ವೆಚ್ಚದಲ್ಲಿ ಹಾಗೂ ಮಹಾರಾಣಿ ಕಲಾ & ವಾಣಿಜ್ಯ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ 116 ಕೋಟಿ ರೂಪಾಯಿನ ಮೀಸಲು ಇಡಲಾಗಿದೆ. ವಿಷಯ ತಜ್ಞರು, ನಾಗರಿಕ ಸೇವಾ ಅಧಿಕಾರಿಗಳು ಮತ್ತು ಉದ್ಯಮಿಗಳಿಂದ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಎಂಬ ಕಾರ್ಯಕ್ರಮದ ಅಡಿ ಮಾರ್ಗದರ್ಶನ ನೀಡಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+