ಬೆಂಗಳೂರಲ್ಲಿ ರೌಡಿಗಳ ಮನೆಗಳ ಮೇಲೆ ರಾತ್ರೋರಾತ್ರಿ ಪೊಲೀಸರ ದಿಢೀರ್ ದಾಳಿ

ಬೆಂಗಳೂರು,ಡಿಸೆಂಬರ್ 29: ಬೆಂಗಳೂರಿನಲ್ಲಿ ರಾತ್ರೋರಾತ್ರಿ ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು,ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿನ ರೌಡಿಗಳ ನಿವಾಸ, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ಸೆಕ್ಷನ್​ 144 ಜಾರಿಯಲ್ಲಿರಲಿದೆ.

Extensive Raids Are Being Conducted At Rowdies Houses In All Police Station Limits Of West Division

ಬೆಂಗಳೂರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಿನಲ್ಲಿ ನಾಕಾಬಂದಿ ಇರಲಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್​ಗಳಲ್ಲಿ ಈವೆಂಟ್​, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್​ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ಕಮಲ್ ಪಂತ್ ಹೇಳಿದ್ದರು.

ಇತ್ತೀಚೆಗಷ್ಟೇ ಹೊಸ ರೂಪಾಂತರದ ಕೊರೋನಾ ವೈರಸ್​ ಹರಡುವಿಕೆ ತಡೆಯುವ ಉದ್ದೇಶದಿಂದ ಈ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಡಿಸೆಂಬರ್ 31ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದರು.

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಶಂಕಾಸ್ಪದ ವ್ಯಕ್ತಿಗಳು ಮತ್ತು ಚಟುವಟಿಕೆಗಳು ಇರುವಿಕೆಯ ಕುರಿತು ಪೊಲೀಸರು ಶೋಧ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+