• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿಗೂಢವಾಗಿ ಕಾಣೆಯಾದ ಟೆಕ್ಕಿ, ಡ್ರೋಣ್ ಕ್ಯಾಮೆರಾದಿಂದ ಹುಡುಕಾಟ

|

ಬೆಂಗಳೂರು: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟಕ್ಕಿಟ್ಟು ಗ್ರಾಹಕರನ್ನು ಭೇಟಿಯಾಗಲು ಹೋಗಿದ್ದ ಟೆಕ್ಕಿ 23 ದಿನಗಳಿಂದ ನಿಗೂಢವಾಗಿ ಕಣ್ಮರೆಯಾಗಿದ್ದಾರೆ.

ಕಳೆದ ಡಿಸೆಂಬರ್ 18 ರಂದು ಅಜಿತಾಬ್ ಕುಮಾರ್ (30) ಎಂಬ ಟೆಕ್ಕಿ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಾಣೆಯಾಗಿದ್ದು, 23 ದಿನಗಳು ಕಳೆದರೂ ಟೆಕ್ಕಿಯ ಸುಳಿವು ಸಿಕ್ಕಿಲ್ಲ. ಅಜಿತಾಬ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡಿರುವ ಪೊಲೀಸರು ಡ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಿದ್ದಾರೆ.

ಅಜಿತಾಬ್ ಮೂಲತಃ ಬಿಹಾರದವರಾಗಿದ್ದು, ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಬ್ರಿಟೀಷ್ ಟೆಲಿಕಾಂ ಕಂಪನಿಯಲ್ಲಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡಿಕೊಂಡು ವೈಟ್ ಫೀಲ್ಡ್ ನ ಅಪಾರ್ಟ್ ಮೆಂಟ್‍ವೊಂದರಲ್ಲಿ ಸ್ನೇಹಿತರ ಜೊತೆ ನೆಲೆಸಿದ್ದರು.

ತನ್ನ ಬಳಿಯಿದ್ದ ಸಿಯಾಜ್ ಕಾರನ್ನು ಮಾರಲು ಓಎಲ್ ಎಕ್ಸ್ ನಲ್ಲಿ ಜಾಹೀರಾತು ನೀಡಿದ್ದು, ಅದರಂತೆ ಕಾರನ್ನು ಬೇರೆಯವರಿಗೆ ತೋರಿಸಲೆಂದು ಡಿಸೆಂಬರ್ 18ರಂದು ಮನೆಯಿಂದ ಹೋಗಿದ್ದ ಅಜಿತಾಬ್ ಈವರೆಗೆ ಪತ್ತೆಯಾಗಿಲ್ಲ.

ಅಜಿತಾಬ್ ಕಾರನ್ನು ಕೊಳ್ಳುವವರು ಆತನಿಗೆ ಕರೆ ಮಾಡಿದ್ದರಿಂದ ಅಂದು ತನ್ನ ಕಾರಿನಲ್ಲಿ ಮನೆಯಿಂದ ಹೊರಹೋಗಿದ್ದರು. ಆದ್ರೆ ಅಜಿತಾಬ್ ಮನೆಗೆ ವಾಪಸ್ಸಾಗದ ಕಾರಣ ಎಲ್ಲೆಡೆ ಹುಡುಕಾಟ ನಡೆಸಿದ ಕುಟುಂಬದವರು ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಜಿತಾಬ್ ಗಾಗಿ ಕರ್ನಾಟಕ ಸೇರಿದಂತೆ ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದು ಯಾವುದೇ ಪ್ರಯೋಜನವಾಗಿಲ್ಲ.

ಕೊನೆಯ ಬಾರಿ ಅಜಿತಾಬ್ ಮೊಬೈಲ್ ಸಿಗ್ನಲ್ ಆಫ್ ಆದ ಸ್ಥಳವಾದ ವರ್ತೂರು ಸಮೀಪದ ಗುಂಜೂರು ಸಮೀಪ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ. 8 ತಂಡಗಳನ್ನು ರಚಿಸಲಾಲಾಗಿದೆ.

ಒಂದು ತಂಡ ಗುಂಜೂರು ಸುತ್ತಮುತ್ತಲಿನ ಪ್ರದೇಶಗಳು, ವರ್ತೂರು ಕೆರೆ, ಕೈಕೊಂಡ್ರಹಳ್ಳಿ ಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು 7 ತಂಡಗಳು ಬೇರೆ ರೀತಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಅಜಿತಾಬ್ ರನ್ನು ಕಾರು ಕೊಳ್ಳುವ ನೆಪದಲ್ಲಿ ಯಾರಾದರು ಕರೆಸಿಕೊಂಡು ಕಿಡ್ನಾಪ್ ಮಾಡಿದ್ದಾರೋ? ಇಲ್ಲವೇ ಬೇರೆ ಯಾವುದೇ ಕಾರಣದಿಂದ ಕಣ್ಮರೆಯಾಗಿದ್ದಾರೋ ಎಂಬ ಅನುಮಾನಗಳು ಕಾಡತೊಡಗಿವೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Whitefield police have been flying a drone over its limits to locate the missing techie Ajitabh Kumar at his last traced location in Gunjur and nearby areas. Ajitabh has not been seen after leaving his home on December 18, 2017 apparently to meet a person who was interested in purchasing his car.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more