Fact Check: ನಾಸಿರ್ ಸಾಬ್ ಜಿಂದಾಬಾದ್ ಅಂದಿದ್ದನ್ನ 'ಪಾಕಿಸ್ತಾನ್ ಜಿಂದಾಬಾದ್' ಎಂದು ತಿರುಚಲಾಯಿತೇ?
'ಪಾಕಿಸ್ತಾನ್ ಜಿಂದಾಬಾದ್' ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ - ಬಿಜೆಪಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರು ಗೆದ್ದ ಬಳಿಕ, ಸಂಭ್ರಮಾಚರಣೆ ಸಂದರ್ಭದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದವು.
ಹಲವು ಮಾಧ್ಯಮಗಳಲ್ಲಿ ಈ ಸುದ್ದಿ ವರದಿಯಾಗುದತ್ತಿದ್ದಂತೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದೆ. ವಿಧಾನಸೌಧದಲ್ಲೇ ಈ ರೀತಿ ಘೋಷಣೆ ಕೂಗಿರುವುದು ಘೋರ ಅಪರಾಧ ಎಂದು ಬಿಜೆಪಿ ಹೇಳಿದೆ. ಅಲ್ಲದೆ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಕೂಡ ಹೇಳಿದೆ.

ಆದರೆ ನಿಜಕ್ಕೂ ಆತ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದನೇ ಎನ್ನುವ ಪ್ರಶ್ನೆ ಇದೆ. ಯಾಕೆಂದರೆ ಮಾಧ್ಯಮಗಳು ತೋರಿಸಿರುವ ವಿಡಿಯೋದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದಕ್ಕೆ ಸ್ಪಷ್ಟನೆ ಇಲ್ಲ.
A video of @NasirHussainINC's supporters saying 'Nasir Saab Zindabad' is reported/shared by several Kannada News Channels with the claim that it is 'Pakistan Zindabad'.
— Mohammed Zubair (@zoo_bear) February 27, 2024
The same is now getting shared by several BJP supporters. pic.twitter.com/vJrCOMG3ZT
ಮತ್ತೊಂದು ವಿಡಿಯೋದಲ್ಲಿ ಬೆಂಬಲಿಗ ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿರುವುದು ಸ್ಪಷ್ಟವಾಗಿದೆ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ ಕರ್ನಾಟಕ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಹರಡುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
This was @INCIndia @NasirHussainINC MP. His supporters were raising "Nasir saab zindabad, Nasir Saab Zindabad, syed Saab zindabad" after #RajyasabhaElection win. And "some" kannada channels misinterpreted it as "Pakistan zindabad.
— Madhu M (@MadhunaikBunty) February 27, 2024
Such a intentional pathetic blunder. pic.twitter.com/Asd7GEeYAc
ಘೋಷಣೆ ಕೂಗಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿರುವ ಸಂದರ್ಭದಲ್ಲಿ ಸ್ಥಳದಲ್ಲೇ ಹಾಜರಿದ್ದ ಮತ್ತೊಬ್ಬ ಪತ್ರಕರ್ತ ಕೂಡ ಅಂತಹ ಯಾವುದೇ ಘೋಷಣೆಗಳನ್ನು ಕೂಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ನಾಸಿರ್ ಸಾಬ್ ಜಿಂದಾಬಾದ್ ಎಂದು ಬೆಂಬಲಿಗರು ಕೂಗಿದ್ದನ್ನೇ ಪಾಕಿಸ್ತಾನ ಜಿಂದಾಬಾದ್ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
How mainstream Kannada media peddles divisive claims
— Anusha Ravi Sood (@anusharavi10) February 27, 2024
What a supporter said: "Nasir Saab Zindabad"
What these channels heard: "Pakistan Zindabad"
Reporters there categorically deny pro-Pakistan slogans were raised. These channels get away with this coz there are no consequences pic.twitter.com/15VhU1lBYH
ಪತ್ರಕರ್ತೆ ಅನೂಷ ರವಿಸೂದ್ ಕೂಡ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ನಾಸಿರ್ ಸಾಬ್ ಜಿಂದಾಬಾದ್ ಎಂದು ಬೆಂಬಲಿಗರು ಕೂಗಿದ್ದನ್ನೇ ಪಾಕಿಸ್ತಾನ ಜಿಂದಾಬಾದ್ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಅಲ್ಲಿದ್ದ ವರದಿಗಾರರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿಲ್ಲ ಎಂದಿರುವುದಾಗಿ ಹೇಳಿದ್ದಾರೆ.












Click it and Unblock the Notifications