ನಕಲಿ ಫೇಸ್ ಬುಕ್ ಖಾತೆ ತೆರೆದು ಸಚಿವ ಸೋಮಶೇಖರ್ ಆಪ್ತರಿಗೆ ಗಾಳ
ಬೆಂಗಳೂರು, ಜು. 06: ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಪಕ್ಷದ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾತ್ರವಲ್ಲದೇ ಆಪ್ತರ ಬಳಿ ತುರ್ತು ಸಾಲ ಹೆಸರಿನಲ್ಲಿ ವಂಚನೆ ಮಾಡಲು ಯತ್ನಿಸಲಾಗಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಚಿವ ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು ಅವರ ಆಪ್ತರಿಗೆ ತುರ್ತು ಹಣ ನೀಡುವಂತೆ ಸಂದೇಶ ರವಾನಿಸಿ ಗೂಗಲ್ ಪೇ ಮಾಡುವಂತೆ ಮೊಬೈಲ್ ನಂಬರ್ ಕೂಡ ನೀಡಿದ್ದಾರೆ. ಈ ವಿಷಯ ಆಪ್ತರೊಬ್ಬರು ಸೋಮಶೇಖರ್ಗೆ ಮಾಹಿತಿ ನೀಡಿದ್ದು, ಆಪ್ತ ಸಹಾಯಕ ಜಿ.ಎಸ್. ಚೇತನ್ ಮೂಲಕ ಹಲಸೂರು ಗೇಟ್ನಲ್ಲಿರುವ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Recommended Video
ಸಹಕಾರ ಸಚಿವ ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಇದಲ್ಲದೇ ಅಪ್ತರ ಬಳಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ನಕಲಿ ಫೇಸ್ ಬುಕ್ ಖಾತೆ ತೆರೆದು ಮೋಸ ಮಾಡಲಾಗುತ್ತಿದೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಮೊಬೈಲ್ ನಂಬರ್ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ. ಸೈಬರ್ ವಂಚಕರು ಹಣ ಪಡೆಯುವ ಉದ್ದೇಶದಿಂದ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
-
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?












Click it and Unblock the Notifications