ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಕಲಿ ಫೇಸ್ ಬುಕ್ ಖಾತೆ ತೆರೆದು ಸಚಿವ ಸೋಮಶೇಖರ್ ಆಪ್ತರಿಗೆ ಗಾಳ

|
Google Oneindia Kannada News

ಬೆಂಗಳೂರು, ಜು. 06: ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಪಕ್ಷದ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾತ್ರವಲ್ಲದೇ ಆಪ್ತರ ಬಳಿ ತುರ್ತು ಸಾಲ ಹೆಸರಿನಲ್ಲಿ ವಂಚನೆ ಮಾಡಲು ಯತ್ನಿಸಲಾಗಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಚಿವ ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು ಅವರ ಆಪ್ತರಿಗೆ ತುರ್ತು ಹಣ ನೀಡುವಂತೆ ಸಂದೇಶ ರವಾನಿಸಿ ಗೂಗಲ್ ಪೇ ಮಾಡುವಂತೆ ಮೊಬೈಲ್ ನಂಬರ್ ಕೂಡ ನೀಡಿದ್ದಾರೆ. ಈ ವಿಷಯ ಆಪ್ತರೊಬ್ಬರು ಸೋಮಶೇಖರ್‌ಗೆ ಮಾಹಿತಿ ನೀಡಿದ್ದು, ಆಪ್ತ ಸಹಾಯಕ ಜಿ.ಎಸ್. ಚೇತನ್ ಮೂಲಕ ಹಲಸೂರು ಗೇಟ್‌ನಲ್ಲಿರುವ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Fake Facebook account opened in the name of Minister Somashekar and demanded money from his friends

Recommended Video

T 20 ವಿಶ್ವ ಕಪ್ ಒಮನ್ ನಲ್ಲಿ ಆದ್ರೆ ಆಟಗಾರರಿಗೆ ತೊಂದ್ರೆ ತಪ್ಪಿದ್ದಲ್ಲ!! | Oneindia Kannada

ಸಹಕಾರ ಸಚಿವ ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಇದಲ್ಲದೇ ಅಪ್ತರ ಬಳಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವರ ಹೆಸರಿಗೆ ಮಸಿ ಬಳಿಯುವ ಉದ್ದೇಶದಿಂದ ನಕಲಿ ಫೇಸ್ ಬುಕ್ ಖಾತೆ ತೆರೆದು ಮೋಸ ಮಾಡಲಾಗುತ್ತಿದೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಮೊಬೈಲ್ ನಂಬರ್ ಜಾಡು ಹಿಡಿದು ತನಿಖೆ ನಡೆಸಲಾಗುತ್ತಿದೆ. ಸೈಬರ್ ವಂಚಕರು ಹಣ ಪಡೆಯುವ ಉದ್ದೇಶದಿಂದ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

English summary
Fake Facebook account has been opened in the name of Minister Somashekar S.T. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X