ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಗೂಳಿಹಟ್ಟಿ ಶೇಖರ್ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ವಂಚನೆಗೆ ಯತ್ನ !

|
Google Oneindia Kannada News

ಬೆಂಗಳೂರು, ಮಾರ್ಚ್‌ 09: ಶಾಸಕರ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಬಳಿಸಿ ಪ್ರಮಖ ಹುದ್ದೆ ಪಡೆಯಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ಪ್ರತಿಷ್ಠಿತ ಹುದ್ದೆ ಪಡೆಯಲು ಯತ್ನಿಸಲಾಗಿದೆ. ಈ ಸಂಬಂಧ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸುರೇಶ್ ಎಂಬ ವ್ಯಕ್ತಿಯನ್ನು ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡುವಂತೆ ಒಕ್ಕಣೆಯುಳ್ಳ ಶಾಸಕ ಗೂಳಿಹಟ್ಟಿ ಶೇಖರ್ ಹೆಸರಿನಲ್ಲಿ ಶಿಫಾರಸು ಪತ್ರವನ್ನು ಅರಣ್ಯ ಸಚಿವರ ಕಚೇರಿಗೆ ರವಾನಿಸಲಾಗಿದೆ. ಗೂಳಿಹಟ್ಟಿ ಶೇಖರ್ ಹೆಸರಿನಲ್ಲಿ ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಗೂ ಕರೆ ಮಾಡಿಸಿ ಸುರೇಶ್ ಎಂಬ ವ್ಯಕ್ತಿಗೆ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಿಸಬೇಕು . ಈ ಸಂಬಂಧ ಕಡತ ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಿದ್ದಾರೆ.

Fake letter head created in the name of MLA Gulihatti Shekar

Recommended Video

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು'-'ಸಿಡಿ 100 ಪರ್ಸೆಂಟ್ ನಕಲಿ, ನನ್ನ ವಿರುದ್ಧ ನಡೆದ ಷಡ್ಯಂತ್ರ' | Oneindia Kannada

ಸದ್ಯ ಕಡತ ಅರಣ್ಯ ಇಲಾಖೆಯ ಅಪರ ಕಾರ್ಯದರ್ಶಿ ಬಳಿಯಿದ್ದು, ಅದರಲ್ಲಿ ಮಾಜಿ ಸಚಿವ ಸಿ.ಟಿ. ರವಿ. ಸಿ.ಸಿ. ಪಾಟೀಲ ಅವರ ಶಿಫಾರಸು ಪತ್ರಗಳು ಕೂಡ ಲಭ್ಯವಾಗಿವೆ. ಶಾಸಕರ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರ ಸೃಷ್ಟಿಸಿ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹುದ್ದೆ ಗಿಟ್ಟಿಸಲು ಯತ್ನಿಸಲಾಗಿದೆ. ಈ ಕುರಿತು ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

English summary
In the name of the MLA Gulahatti Shekhar, a fake letter head has been created and is seeking the post of Vice President of Forest Development Corporation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X