ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸಂದೇಶ ವೈರಲ್‌- ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು, ಜೂ. 03: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ ಎನ್ನಲಾದ ಸುಳ್ಳು ಸುದ್ದಿಯ ಕುರಿತು ಸಿ ಎನ್‌ ಅಶ್ವತ್ಥನಾರಾಯಣ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾಡಿದ್ದಾರೆ ಎನ್ನಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ ವೈರಲ್‌ ಆಗಿತ್ತು.

ಈ ಡಿಸಿಎಂ ಅಶ್ವತ್ಥನಾರಾಯಣ (DCM Ashwathnarayan) ಎಂಬ ಟ್ವೀಟ್ಟರ್‌ ಖಾತೆಯಿಂದ ಮಾಡಲಾಗಿದೆ ಎಂದು ಬಿಂಬಿಸುವ ಸ್ಕ್ರೀನ್‌ಶಾಟ್‌ನಲ್ಲಿ, ಶಿಕ್ಷಣ ತಜ್ಞರು ಹಾಗೂ ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಚರ್ಚೆ ನಡೆಸಿದ ನಂತರ ಸರ್ಕಾರ ಕರ್ನಾಟಕ ರಾಜ್ಯ ಮಂಡಳಿಯ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 7 ರಿಂದ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ, ಆದರೆ ಸಮಯವಕಾಶವನ್ನು 120 ಕ್ಕೆ ಇಳಿಕೆ ಮಾಡಲಾಗುತ್ತದೆ ಎಂದು ಬರೆದಿತ್ತು.

Fake News about 2nd PU Exams starts from July 7 in the name of Ashwath Narayan; DCM reacts

ಆದರೆ ಈ ಸುದ್ದಿ ಸುಳ್ಳು ಎಂದು ಸ್ಪಷ್ಟನೆ ನೀಡಿರುವ ಡಿಸಿಎಂ, ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ ಎಂದು ಹೇಳಿದ್ದಾರೆ.

ಈ ನಡುವೆ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ರದ್ದಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+