ಆರ್.ಆರ್.ನಗರ ವೋಟರ್ ಐಡಿ ಪತ್ತೆ : ಸಿಬಿಐಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಮಾರ್ಚ್ 06 : ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೋಟರ್ ಐಡಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಗೃಹ ಇಲಾಖೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಬುಧವಾರ ಎನ್.ರಾಕೇಶ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಏಕಸದಸ್ಯ ಪೀಠ ಜಾಲಹಳ್ಳಿ ಪೊಲೀಸರು, ಕರ್ನಾಟಕ ಗೃಹ ಇಲಾಖೆ, ಸಿಬಿಐಗೆ ತುರ್ತು ನೋಟಿಸ್ ನೀಡಿತು. ಮಾರ್ಚ್ 11ಕ್ಕೆ ವಿಚಾರಣೆ ಮುಂದೂಡಿತು.
2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಇರುವಾಗ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರಕ್ಕೂ ಅಧಿಕ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು.

ಈ ಪ್ರಕರಣದ ಕುರಿತು ಸಮರ್ಪಕವಾದ ತನಿಖೆ ನಡೆದಿಲ್ಲ. ಸರಿಯಾಗಿ ತನಿಖೆ ನಡೆಸದೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಐಡಿ ಪತ್ತೆಯಾದ ಬಳಿಕ ಮೇ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಮೇ 28ರಂದು ಚುನಾವಣೆ ನಡೆಸಿ ಮೇ 31ರಂದು ಫಲಿತಾಂಶ ಪ್ರಕಟಿಸಲಾಗಿತ್ತು.












Click it and Unblock the Notifications