ಬೆಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಬೆಂಗಳೂರು, ನವೆಂಬರ್ 12 : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೃತಪಟ್ಟವರನ್ನು ಜನಾರ್ಧನ್ (52), ಸುಷ್ಮಿತ, ಸುದರ್ಶಿನಿ (29), ಸೋನಿಕಾ (6) ಎಂದು ಗುರುತಿಸಲಾಗಿದೆ. ತಂದೆ, ತಾಯಿ, ಮಗಳು, ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಒಂದು ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿಸಲಾಗಿದೆ. ಆದ್ದರಿಂದ, ಮಗುವನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Family of four commits suicide in Bengaluru

ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ ವ್ಯಕ್ತಿಯೊಬ್ಬರಿಗೆ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ, ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ವಾಪಸ್ ಬರುವುದಿಲ್ಲ ಎಂದು ನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಜನಾರ್ದನ್ ಪತ್ನಿ, ಮಕ್ಕಳಿಗೆ ವಿಷ ನೀಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಡೆತ್‌ನೋಟ್‌ನಲ್ಲಿ ಮನೆ ಖರೀದಿಗೆ ಹಣ ನೀಡಿದ ಬಗ್ಗೆ ಉಲ್ಲೇಖಿಸಿದ್ದಾರೆ.

ವಿಷಯ ತಿಳಿದ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತ ದೇಹಗಳನ್ನು ಕಳುಹಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+