ಬೆಂಗಳೂರಿನ ಖ್ಯಾತ ವೀಣಾ ವಾದಕನಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ಫೆಬ್ರವರಿ 25: ಪತ್ನಿ ಹಾಗೂ ನಾದಿನಿಯನ್ನು ಹತ್ಯೆ ಮಾಡಿ ವಿಕೃತ ಮೆರೆದಿದ್ದ ಆರೋಪ ಎದರಿಸುತ್ತಿದ್ದ ಖ್ಯಾತ ವೀಣಾ ವಾದಕ ಬಿ.ಎಂ. ಚಂದ್ರಶೇಖರ್ ಗೆ ಜೀವಾವಧಿ ಶಿಕ್ಷೆ ನೀಡಿ 70 ನೇ ಸಿಟಿ ಸಿವಿಲ್ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಈ ಪ್ರಕರಣದಲ್ಲಿ ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡುವಂತೆ ಸರ್ಕಾರಿ ಅಭೀಯೋಜಕಿ ಎಚ್.ಆರ್. ಸತ್ಯವತಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ವೀಣೆ ನುಡಿಸುವುದರಲ್ಲಿ ಖ್ಯಾತ ಹೆಸರು ಮಾಡಿದ್ದ ಬಿ.ಎಂ. ಚಂದ್ರಶೇಖರ್ ಅಲಿಯಾಸ್ ಚಂದ್ರು ಗಿರಿನಗರದಲ್ಲಿ ವಾಸವಾಗಿದ್ದರು. ಕುಡಿಯಲಿಕ್ಕೆ ಹಣ ಕೊಡಲಿಲ್ಲ ಎಂದು ಪತ್ನಿ ಪ್ರೀತಿ ಆಚಾರ್ಯ ಜತೆ ಜಗಳ ತೆಗೆದಿದ್ದ ವೀಣಾ ವಾದಕ ವಿಕೃತವಾಗಿ ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಗಿರಿನಗರ ಪೊಲೀಸರು ಆರೋಪಿ ಚಂದ್ರಶೇಖರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2013 ರಲ್ಲಿ ಡಬಲ್ ಮರ್ಡರ್ ಪ್ರಕರಣ ವರದಿಯಾಗಿತ್ತು. ಸರ್ಕಾರಿ ಅಭಿಯೋಜಕಿ ಎಚ್.ಆರ್. ಸತ್ಯವತಿ ಮೃತಳ ಪರ ವಾದ ಮಂಡಿಸಿದ್ದರು.

Recommended Video
ಪ್ರಕರಣದ ವಾದ ಮತ್ತು ಪ್ರತಿವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಿರುವ 70 ನೇ ಸಿಸಿ ಸಿವಿಲ್ ನ್ಯಾಯಾಲಯದ ನ್ಯಾ. ಗುರುರಾಜ್ ಸೋಮಕಳ್ಳರ್ ಅವರು, ಅಪರಾಧಿ ಚಂಧ್ರಶೇಖರ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಮೃತ ಪ್ರೀತಿ ಆಚಾರ್ಯ ಹಾಗೂ ಅವರ ಪುತ್ರಿ ವೇದ ಅವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಹಣ ನೀಡುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ಸೂಚಿಸಿದ್ದಾರೆ. ಪರಿಹಾರ ಮೊತ್ತ ಆಪಾದಿತ ಚಂದ್ರಶೇಖರ್ ನೀಡದಿದ್ದಲ್ಲಿ, ಅವರ ಆಸ್ತಿಯನ್ನು ಮುಟ್ಟು ಗೋಲು ಹಾಕಿಕೊಂಡು ಮಗುವಿನ ಭವಿಷ್ಯಕ್ಕಾಗಿ ನೀಡುವಂತೆ ನ್ಯಾಯಾಧೀಶರು ತೀರ್ಪಿನಲ್ಲಿಯೇ ಉಲ್ಲೇಖಿಸಿದ್ದಾರೆ. ಇನ್ನು ಇಬ್ಬರನ್ನು ಹತ್ಯೆ ಮಾಡಿದ್ದ ಚಂದ್ರಶೇಖರ್ ಗೆ ಮರಣ ದಂಡನೆ ನೀಡುವುದೇ ಸೂಕ್ತ ಶಿಕ್ಷೆ. ಸಿಟಿ ಸಿವಿಲ್ ನ್ಯಾಯಾಲಯ ನೀಡಿರುವ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಮರಣ ದಂಡನೆಗೆ ಮನವಿ ಮಾಡಲಾಗುವುದು ಎಂದು ಸರ್ಕಾರಿ ಅಭಿಯೋಜಕಿ ಸತ್ಯವತಿ ತಿಳಿಸಿದ್ದಾರೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications