ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ, ಬಂಧನ

By Gururaj
|
Google Oneindia Kannada News

ಬೆಂಗಳೂರು, ಜುಲೈ 09 : ಬೆಂಗಳೂರಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ರೈತರ ಪ್ರತಿಭಟನೆಯಿಂದ ಶೇಷಾದ್ರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಕರ್ನಾಟಕ ಸರ್ಕಾರ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ನೂರಾರು ರೈತರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದರು. ಆದರೆ, ರೈತರು ಮೌರ್ಯ ಸರ್ಕಲ್ ಬಳಿ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡರು.

ರೈತರ ಸಾಲ ಮನ್ನಾ ನಿಯಮಗಳೇನು? ಇಲ್ಲಿದೆ ಮಾಹಿತಿರೈತರ ಸಾಲ ಮನ್ನಾ ನಿಯಮಗಳೇನು? ಇಲ್ಲಿದೆ ಮಾಹಿತಿ

farmer

ನೂರಾರು ರೈತರು ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಹೊರಟಿದ್ದರು. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ನೂರಾರು ಸದಸ್ಯರು ಬೃಹತ್ ಪ್ರತಿಭಟನಾ ಜಾಥಾದಲ್ಲಿ ಪಾಲ್ಗೊಂಡಿದ್ದರು. ರೈತರ ಪ್ರತಿಭಟನೆಯಿಂದಾಗಿ ಶೇಷಾದ್ರಿ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಸಂಚಾದ ದಟ್ಟಣೆ ಉಂಟಾಗಿದೆ.

ಸಾಲಮನ್ನಾ ತಾರತಮ್ಯ ಪ್ರಶ್ನಿಸಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಗೆ!ಸಾಲಮನ್ನಾ ತಾರತಮ್ಯ ಪ್ರಶ್ನಿಸಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಗೆ!

ಸರ್ಕಾರ ನಂಬಿಕೆ ದ್ರೋಹ ಮಾಡಿದೆ : ಕರ್ನಾಟಕ ಸರ್ಕಾರ ನಂಬಿಕೆ ದ್ರೋಹ ಮಾಡಿದೆ ಎಂದು ಆರೋಪಿಸಿ ಈ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿತ್ತು. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದರು.

ಜುಲೈ 5ರಂದು 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 34 ಸಾವಿರ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದರು. ಸಾಲ ಮನ್ನಾಗೆ ಕೆಲವು ನಿಯಮಗಳನ್ನು ಘೋಷಣೆ ಮಾಡಿದ್ದರು.

ಆದರೆ, ಸರ್ಕಾರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಈಗ ಸಂಪೂರ್ಣ ಸಾಲ ಮನ್ನಾ ಮಾಡದೇ ನಂಬಿಕೆ ದ್ರೋಹ ಮಾಡಿದೆ ಎಂದು ರೈತರು ಆರೋಪ ಮಾಡುತ್ತಿದ್ದಾರೆ.

English summary
Hundreds of farmers protesting against Karnataka Government and Demanding for full farm loan waiver. Sheshadri Road closed after Vidhana Soudha chalo by farmers on July 9, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X