ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಶೋಕ್ ಖೇಣಿ ರಾಜೀನಾಮೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

By Mahesh
|
Google Oneindia Kannada News

ಬೆಂಗಳೂರು, ಅ.16: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರು ರೈತರ ಆತ್ಮಹತ್ಯೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ರೈತರು, ಜನಪರ ಸಂಘಟನೆಗಳು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕನಕಪುರ ರಸ್ತೆಯಲ್ಲಿರುವ ನೈಸ್‌ರಸ್ತೆಯ ಟೋಲ್‌ನ್ನು ಧ್ವಂಸಗೊಳಿಸಿದ್ದಾರೆ.

ರೈತರು ಸಾಲದ ಹಣವನ್ನು ಜೂಜಾಟ, ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಪೋಲು ಮಾಡಿದ್ದೆ ಆತ್ಮಹತ್ಯೆಗೆ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಅಶೋಕ ಖೇಣಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ‍್ಯಕರ್ತರು ನಗರದಲ್ಲಿಂದು ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Farmers Protest against MLA Ashok Kheny: toll booths targeted

ಬಾಗೇಪಲ್ಲಿ ತಾಲೂಕಿನ ಗುಮ್ಮನಾಯಕಪಾಳ್ಯದಲ್ಲಿ 'ಕ್ರಾಂತಿವೀರ' ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಅಶೋಕ್ ಖೇಣಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರೈತರ ಆತ್ಮಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ನೈಸ್ ರಸ್ತೆಯ ಟೋಲ್‌ಗೆ ಮುತ್ತಿಗೆ ಹಾಕಿದ 40 ರಿಂದ 50 ಜನ ಕಾರ್ಯಕರ್ತರು ಹೇಳಿಕೆ ಖಂಡಿಸಿ ಖೇಣಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ನಡೆಸುತ್ತ ಟೋಲ್‌ಗಳ ಮೇಲೆ ಕಲ್ಲು ತೂರಿ ಗಾಜುಗಳನ್ನು ಒಡೆದು, ತಡೆಗಳನ್ನು ಮುರಿದು, ಕ್ಯಾಬಿನ್‌ಗಳನ್ನು ಕಿತ್ತು ಧ್ವಂಸಗೊಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ತಲಘಟ್ಟಪುರ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಲ್ಲು ತೂರಾಟ ಸಂಬಂಧ ಮುಖಂಡ ನಿತೀಶ್‌ಗೌಡ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

ಬೀದರ್‌ನಲ್ಲೂ ಪ್ರತಿಭಟನೆ: ಬೀದರ್ ಭಾಗದ ರೈತರೂ ಸಂಕಷ್ಟದಲ್ಲಿದ್ದಾರೆ. ರೈತರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿರುವ ಶಾಸಕ ಅಶೋಕ್ ಖೇಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಧಾರವಾಡದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

English summary
The protest by various organisations against the statement of Bidar South MLA Ashok Kheny regarding farmers’ suicides at the toll gate of Hubballi-Dharwad Bypass Road here on Friday turned violent with the toll booths being targeted by angry protestors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X