ಕೆ. ಆರ್. ಮಾರುಕಟ್ಟೆ ತೆರೆಯುವಂತೆ ಪ್ರತಿಭಟನೆ

ಬೆಂಗಳೂರು, ಆಗಸ್ಟ್ 25: ಬೆಂಗಳೂರಿನ ಕೆ. ಆರ್. ಮಾರುಕಟ್ಟೆ ಮತ್ತು ಕಲಾಸಿಪಾಳ್ಯದ ಮಾರುಕಟ್ಟೆ ತೆರೆಯುವಂತೆ ರೈತರು ಪ್ರತಿಭಟನೆ ನಡೆಸಿದರು. ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ.

Recommended Video

      Chris Gayle went to a party with Usain Bolt, who has now tested Corona Positive | Oneindia Kannada

      ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಕೆ. ಆರ್. ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು. ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಮಾರುಕಟ್ಟೆಯನ್ನು ತೆರೆಯಬೇಕು ಎಂದು ಒತ್ತಾಯಿಸಿದರು.

      ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, "ಕೋವಿಡ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈಗ ಲಾಕ್ ಡೌನ್ ತೆರವು ಮಾಡಲಾಗಿದೆ. ಹಲವು ಮಾರುಕಟ್ಟೆಗಳು ತೆರೆದಿವೆ. ಬಿಬಿಎಂಪಿ ಮಾತ್ರ ಮಾರುಕಟ್ಟೆ ತೆರೆಯಲು ಅನುಮತಿ ನೀಡಿಲ್ಲ" ಎಂದು ಆರೋಪಿಸಿದರು.

      Farmers Protest Demanding Reopen Of KR Market

      "ರೈತರು ತರಕಾರಿ, ಹೂವುಗಳನ್ನು ತಂದು ಮಾರಾಟ ಮಾಡಲು ಕೆ. ಆರ್. ಮಾಕರುಟ್ಟೆ, ಕಲಾಸಿಪಾಳ್ಯ ಸರಿಯಾದ ಸ್ಥಳವಾಗಿದೆ. ಇದು ನಗರದ ಮಧ್ಯ ಭಾಗದಲ್ಲಿದ್ದು, ಜನರಿಗೂ ಸಹ ಅನುಕೂಲವಾಗಲಿದೆ" ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

      "ಎಲ್ಲಾ ಮುಂಜಾಗ್ರತಾ ಕ್ರಮಗಳನ್ನಯ ಕೈಗೊಂಡು ಮಾರುಕಟ್ಟೆಯನ್ನು ತೆರೆಯಲು ಬಿಬಿಎಂಪಿ ಅನುಮತಿ ನೀಡಬೇಕು. ಮಾರುಕಟ್ಟೆ ಮುಚ್ಚಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ರೈತರಿಗೆ ಅಪಾರವಾದ ನಷ್ಟ ಉಂಟಾಗುತ್ತಿದೆ" ಎಂದರು.

      ಬಿಬಿಎಂಪಿಯ ವಿಶೇಷ ಆಯುಕ್ತ ಜಿ. ಮಂಜುನಾಥ್ ಅವರು ಸ್ಥಳಕ್ಕೆ ಆಗಮಿಸಿದ ರೈತರ ಅಹವಾಲುಗಳನ್ನು ಆಲಿಸಿದರು. ಮಾರುಕಟ್ಟೆ ತೆರೆಯಲು ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+