• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ವಿಧಾನಸೌಧದೆದುರು ರೈತರ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 09:ಕರ್ನಾಟಕದಲ್ಲೂ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರು ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.

"ಈ ಭಾರತ್ ಬಂದ್ ನೂರಕ್ಕೆ ನೂರರಷ್ಟು ರಾಜಕೀಯ ಪ್ರೇರಿತ"

ಡಿಸೆಂಬರ್ 8 ರಂದು ಭಾರತ ಬಂದ್‌ಗೆ ಬೆಂಬಲ ನೀಡಿದ್ದ ರೈತ ಪರ ಸಂಘಟನೆಗಳು ಇಂದು ಬೆಂಗಳೂರಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ.

Bengaluru : Farmers Protest March From City Railway Station To Vidhana Soudha On Dec 9

ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್‍ರಾವ್ ಸರ್ಕಲ್ ಫ್ಲೈಓವರ್ ಮೂಲಕ ವಿಧಾನಸೌಧಕ್ಕೆ ಲಗ್ಗೆ ಇಡಲಿದ್ದಾರೆ.

ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ಕಡೆ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಸಂಗೊಳ್ಳಿರಾಯಣ್ಣ ಪ್ರತಿಮೆ, ಮೌರ್ಯ ಸರ್ಕಲ್ ಫ್ಲೈಓವರ್, ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗ್ತಿದೆ. 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದು ಪಶ್ಚಿಮ ವಲಯ ಹೆಚ್ಚುವರಿ ಆಯುಕ್ತ ಸೌಮೇಂದು ಮುಖರ್ಜಿ ಹೇಳಿದ್ದಾರೆ.

ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್

ರೈತ ವಿರೋಧಿ ಕಾನೂನುಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕೂಡ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಮನವಿ ಪತ್ರ ಸಲ್ಲಿಸಲಿದೆ.

   ಸಿದ್ದರಾಮಯ್ಯಗೆ ತೀವ್ರ ಮುಜುಗರ ತಂದೊಡ್ಡಿದ ಅವರು ಬರೆದಿದ್ದ 7ವರ್ಷದ ಹಿಂದಿನ ಆ ಪತ್ರ | Oneindia Kannada

   ಕಾರ್ಪೋರೇಷನ್ ಸರ್ಕಲ್, ವಿಧಾನಸೌಧ ಮೂಲಕ ರಾಜಭವನಕ್ಕೆ ತೆರಳಲಿದ್ದಾರೆ. ಇತ್ತ ರೈತರ ಬಾರುಕೋಲು ಚಳುವಳಿ, ವಿಧಾನಸೌಧ ಮುತ್ತಿಗೆಯನ್ನು ವಿಫಲಗೊಳಿಸಲು ಬೆಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

   English summary
   Traffic likely to be affected as farmers’ protest to continue in Bengaluru, Farmers Protest March From City Railway Station To Vidhana Soudha On Dec 9 in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X